ಉಡುಪಿ : ಅಲೆಗಳ ಆರ್ಭಟದ ಸುಳಿಗೆ ಮೂವರು ಪ್ರವಾಸಿಗರು ಸಿಲುಕಿದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಈ ಪೈಕಿ ಓರ್ವ ಮೃತನಾಗಿದ್ದರೆ, ಮತ್ತಿಬ್ಬರು ಚೇತರಿಸಿಕೊಂಡಿದ್ದಾರೆ ಗಿರೀಶ್(26) ಎಂಬ ಪ್ರವಾಸಿಗ ಕೊನೆಯುಸಿರೆಳೆದಿದ್ದು, ಇನ್ನುಳಿದ ಅನಂತ ಗೌಡ(42), ಸಂತೋಷ್ (27) ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಹಾಸನದ ಬೇಲೂರಿನಿಂದ ಎಂಟು ಮಂದಿಯ ಕುಟುಂಬ ಶೃಂಗೇರಿ ಮೂಲಕ ಮಲ್ಪೆ ಬೀಚ್ಗೆ ಬಂದಿತ್ತು. ಈ ಪೈಕಿ ಅನಂತ ಗೌಡ, ಸಂತೋಷ್ ಹಾಗೂ ಗಿರೀಶ್ ಎಂಬುವರು ನೀರಿನ ಸುಳಿಗೆ ಸಿಕ್ಕಿದರು. ಗಿರೀಶ್ ಮೃತರಾದರೆ ಮತ್ತೆ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಅಲೆಗಳ ಜೊತೆ ಆಟವಾಡುತ್ತಾ ತೀರದಿಂದ ಸಾಕಷ್ಟು ಮುಂದೆ ಹೋಗಿದ್ದರು. ಇದಕ್ಕಿದ್ದಂತೆ ಅಲೆಗಳ ಆರ್ಭಟ ಹೆಚ್ಚಿ, ಈ ಬಗ್ಗೆ ಅರಿವಿಲ್ಲದ ಮೂವರು ಪ್ರವಾಸಿಗರು ನೀರು ಪಾಲಾಗಿದ್ದರು. ಈ ವೇಳೆ ಬೀಚ್ ನಿರ್ವಹಣೆ ಮಾಡುವ, ಓಸಿಯನ್ ಅಡ್ವೆಂಚರ್ಸ್ನವರು, ತಕ್ಷಣ ಜಾಗೃತರಾಗಿ ಕಾರ್ಯಚರಣೆ ನಡೆಸಿ, ಬೋಟುಗಳನ್ನು ಬಳಸಿಕೊಂಡು ಕಡಲಿಗಿಳಿದು ಇಬ್ಬರನ್ನು ರಕ್ಷಿಸಿದರು.