ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಕ್ವಿರಿತಾಗಿ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಸಮುದಾಯದ ಹಲವು ಯುವಕರು ತೀವ್ರವಾಗಿ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಈ ಘಟನೆ ನಡೆದಿದೆ.
ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಮೈಸೂರಿನ ರೋಹಿತ್ ಎಂದು ಹೇಳಲಾಗುತ್ತಿದ್ದು, ರೋಹಿತ್ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ ನಡೆಸಲಾಗಿದೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ಯುವಕ ರೋಹಿತ್ ದೂರು ನೀಡಿದ್ದಾನೆ.
ಪಾಕಿಸ್ತಾನದ ಪರ ಹಾಗೂ ಅಲ್ಲಾಹೂ ಪರ ಘೋಷಣೆ ಕೂಗುವಂತೆ ಒತ್ತಾಯ ಮಾಡಿದ್ದಾರೆ. ಮೋದಿ ಪರ ಹಾಡು ಬರೆದಿದ್ದೀಯಾ ನಿನ್ನ ಸಾಯಿಸುತ್ತೇವೆ ಅಂತ ಬೆದರಿಕೆ ಹಾಕಿ ರೋಹಿತನ ಬಟ್ಟೆ ಹರಿದು ದೈಹಿಕವಾಗಿ ಹಲ್ಲೆ ನಡೆಸಿ ಮುಸ್ಲಿಂ ಯುವಕರು ಪರಾರಿಯಾಗಿದ್ದಾರೆ.
ನಂತರ ಹಲ್ಲೆಗೊಳಗಾದ ಯುವಕ ರೋಹಿತ್ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ವಿಡಿಯೋ ಮೂಲಕ ರೋಹಿತ್ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾನೆ. ಲಕ್ಷ್ಮಿಪುರಂ ಠಾಣೆ ಪೊಲೀಸರು ಪ್ರಕರಣದ ಕಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.