ರಾಯಚೂರು: ಜಿಲ್ಲೆಯ ಹಚ್ಚಿ ಚಿನ್ನದ ಗಣಿಯಲ್ಲಿ ಏಕಾಏಕಿ ಏರ್ ಬ್ಲಾಸ್ಟ್ ಆದ ಪರಿಣಾಮ, 6 ಕಾರ್ಮಿಕರು ಗಾಯಗೊಂಡಿರೋ ಘಟನೆ ನಡೆದಿದೆ. ಈ ಘಟನೆಯಲ್ಲಿ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರೋದಾಗಿ ಹೇಳಲಾಗುತ್ತಿದೆ.
ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಸುರಂಗ ಮಾರ್ಗದ ಕೆಲಸ ನಡೆಯುತ್ತಿದ್ದಂತ ಸಂದರ್ಭದಲ್ಲಿ ಏಕಾಏಕಿ ಏರ್ ಬ್ಲಾಸ್ಟ್ ಆಗಿದೆ. ಈ ಪರಿಣಾಮ ಒಂದು ಬದಿಯಲ್ಲಿ ಮಣ್ಣು ಕುಸಿತಗೊಂಡಿದೆ. ಇದರಿಂದಾಗಿ ಕಾರ್ಮಿಕರು ಉಸಿರಾಟದ ಸಮಸ್ಯೆಗೆ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.
ಚಿನ್ನದ ಗಣಿಯಲ್ಲಿ ಮಣ್ಣು ಕುಸಿತಗೊಂಡು ಅಸ್ವಸ್ಥಗೊಂಡಂತ ಕಾರ್ಮಿಕರನ್ನು ಕೂಡಲೇ ರಕ್ಷಿಸಲಾಗಿದೆ. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಅವರಲ್ಲಿ ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿರೋದಾಗಿ ಹೇಳಲಾಗುತ್ತಿದೆ.
BREAKING : ಮಾಜಿ ಸಿಎಂ HD ಕುಮಾರಸ್ವಾಮಿಗೆ ಬಿಗ್ ರಿಲೀಫ್ : ರಾಜ್ಯ ಮಹಿಳಾ ಆಯೋಗದ ನೋಟಿಸ್ ಗೆ ಹೈಕೋರ್ಟ್ ತಡೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿದೆ; ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿ ಹುನ್ನಾರ: ಡಿಸಿಎಂ ಡಿ.ಕೆ.ಶಿವಕುಮಾರ್