ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.19 ರಂದು ಒಟ್ಟು 14 ನಾಮಪತ್ರಗಳು ಸಲ್ಲಿಕೆ ಆಗಿವೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್, ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿ ಚಂದ್ರಶೇಖರ್ ಹೆಚ್ ಸಿ, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ಡಿ.ಎಸ್.ಈಶ್ವರಪ್ಪ, ಪಿ.ಶ್ರೀಪತಿ, ಎಸ್.ಬಾಲಕೃಷ್ಣ ಭಟ್, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ ವೈ.ಆರ್, ಶೇಖರಪ್ಪ ಹೆಚ್, ಹನುಮಂತಪ್ಪ, ಜಿ.ಜಯದೇವ ಸೇರಿದಂತೆ ಇಂದು ಒಟ್ಟು 14 ನಾಮಪತ್ರಗಳ ಸಲ್ಲಿಕೆಯಾಗಿದೆ.
ಒಟ್ಟು 38 ನಾಮಪತ್ರ ಸಲ್ಲಿಕೆ : ಏ.12 ರಿಂದ 19 ರವರೆಗೆ ಒಟ್ಟು 27 ಅಭ್ಯರ್ಥಿಗಳಿಂದ 38 ನಾಮಪತ್ರಗಳ ಸಲ್ಲಿಕೆಯಾಗಿದೆ. ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.22 ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು ಮೇ 7 ರಂದು ಮತದಾನ ನಡೆಯಲಿದೆ.
ಶಿವಮೊಗ್ಗ: ಏ.21ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Watch Video : ರಷ್ಯಾ ಸೂಪರ್ಸಾನಿಕ್ ಬಾಂಬರ್ ವಿಮಾನ ಪತನ, ಫ್ಲೈಟ್ ಫೈರ್ಬಾಲ್ ಆಗಿ ಮಾರ್ಪಟ್ಟ ವಿಡಿಯೋ ವೈರಲ್