ಶಿವಮೊಗ್ಗ : ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 14-ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಶ್ರೀಮತಿ ಪೂನಂ ಭಾ.ಆ.ಸೇ., ರವರು ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕರಾಗಿ ನಿಯೋಜನೆಗೊಂಡಿದ್ದು, 2024ರ ಏಪ್ರಿಲ್ 18 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ವರದಿ ಮಾಡಿಕೊಂಡಿರುತ್ತಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಶಿವಮೊಗ್ಗ, ತೀರ್ಥಹಳ್ಳಿ, ಶಿಕಾರಿಪುರ, ಸೊರಬ, ಸಾಗರ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಚುನಾವಣಾ ಸಾಮಾನ್ಯ ವೀಕ್ಷಕರನ್ನು ದೂರವಾಣಿ ಸಂಖ್ಯೆ +91-8147695215ರ ಮೂಲಕ ಸಂಪರ್ಕಿಸಬಹುದಾಗಿರುತ್ತದೆ. ಚುನಾವಣಾ ವೀಕ್ಷಕರ ಈ-ಮೇಲ್ ವಿಳಾಸ generalobservershimoga@gmail.com ಆಗಿದ್ದು, ಸರ್ಕಿಟ್ ಹೌಸ್ ಅತಿಥಿ ಗೃಹದ ಕೊಠಡಿ ಸಂಖ್ಯೆ 02ರಲ್ಲಿ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಭೂಮಿ ಮನುಷ್ಯನಿಗೆ ಸೇರಿದ್ದಲ್ಲ, ಕಾಡುಗಳನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸಬೇಕು: ಸುಪ್ರೀಂ ಕೋರ್ಟ್