Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Eat Garlic Daily: ದಿನವೂ ಬೆಳ್ಳುಳ್ಳಿ ತಿಂದರೆ ದೇಹದಲ್ಲಿ ಏನಾಗುತ್ತದೆ? ಇಲ್ಲಿದೆ ಅಚ್ಚರಿಯ ಮಾಹಿತಿ!

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಮನಿಸಿ : ‘ಗುಡುಗು-ಸಿಡಿಲು’ ಹಾನಿಯಿಂದ ಸಂರಕ್ಷಣೆಗೆ ಈ ಕ್ರಮಗಳನ್ನು ಅನುಸರಿಸಿ
KARNATAKA

ಸಾರ್ವಜನಿಕರೇ ಗಮನಿಸಿ : ‘ಗುಡುಗು-ಸಿಡಿಲು’ ಹಾನಿಯಿಂದ ಸಂರಕ್ಷಣೆಗೆ ಈ ಕ್ರಮಗಳನ್ನು ಅನುಸರಿಸಿ

By kannadanewsnow57

ಬೆಂಗಳೂರು : ಆರಂಭದ ಮಳೆಗಾಲದಲ್ಲಿ ಕಂಡುಬರಬಹುದಾದ ಗುಡುಗು-ಸಿಡಿಲು ಹಾನಿಯಿಂದ ಸಂರಕ್ಷಣೆಗೆ ಅಗತ್ಯ ಕ್ರಮ ಅನುಸರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಸಾಮಾನ್ಯವಾಗಿ ಮೇ ತಿಂಗಳಿನಲ್ಲಿ ಕಂಡುಬರುವ ಮಳೆಗಾಲದ ಆರಂಭದ ಹಂತದಲ್ಲಿ ತೀವ್ರತರದ ಗುಡುಗು-ಸಿಡಿಲು ಕಂಡುಬರುವುದು ಸಾಮಾನ್ಯವಾಗಿದ್ದು, ಜೊತೆಗೆ ಬಿರುಸಾಗಿ ಗಾಳಿ ಸಹಿತ ಮಳೆ ಕಂಡುಬರುವುದು ವಾಡಿಕೆಯಾಗಿದೆ. ಈ ಹಿನ್ನಲೆಯಲ್ಲಿ ಬಯಲು ಪ್ರದೇಶಗಳಲ್ಲಿ, ಗಿಡಗಳ ಕೆಳಗಡೆ ಅಥವಾ ಕಬ್ಬಿಣದಿಂದ ಕೂಡಿರುವ ಕಟ್ಟಡ ಅಥವಾ ಶೆಡ್‍ಗಳಲ್ಲಿ ಆಶ್ರಯ ಪಡೆಯದೇ ಸೂಕ್ತ ಸ್ಥಳದಲ್ಲಿ ಇದ್ದು, ಜೀವ ಹಾನಿಯನ್ನು ತಪ್ಪಿಸಲು ಸಾರ್ವಜನಿಕರಲ್ಲಿ ಅವರು ವಿನಂತಿಸಿದ್ದಾರೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕಾಲ ಕಾಲಕ್ಕೆ ನೀಡುವ ಮಾರ್ಗಸೂಚನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆರೋಗ್ಯದ ದೃಷ್ಟಿಯಿಂದ ನೀಡುವ ಸಲಹೆಗಳನ್ನು ಅನುಸರಿಸಿ ವಿಪತ್ತಿನಿಂದ ಪಾರಾಗಲು ಕೈಜೋಡಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೈಗೊಳ್ಳಬೇಕಾದ ಕ್ರಮಗಳು:
ಗುಡುಗು-ಮಿಂಚು ಬರಲಿದೆ ಎಂದು ಗೊತ್ತಾದಾಗ ನೀವು ಬಯಲಿನಲ್ಲಿದ್ದರೆ, ಪಕ್ಕದಲ್ಲಿರುವ ತಗ್ಗು ಪ್ರದೇಶಕ್ಕೆ ಹೋಗಿ ಕುಳಿತುಕೊಳ್ಳಬೇಕು. ತಗ್ಗು ಪ್ರದೇಶ ಇಲ್ಲದೇ ಬಯಲಿನಲ್ಲಿಯೇ ಇರಬೇಕಾದರೆ ನಿಮ್ಮ ತಲೆಯನ್ನು ಮೊಣಕಾಲುಗಳ ನಡುವೆ ಹುದುಗಿಸಿಕೊಳ್ಳಿ ಇದು ಮಿಂಚಿನಿಂದ ಮೆದುಳಿಗೂ, ಹೃದಯಕ್ಕೂ ಆಗುವ ಹಾನಿಯನ್ನು ತಪ್ಪಿಸುತ್ತದೆ.
ಮರಗಳಿದ್ದ ಪ್ರದೇಶದಲ್ಲಿ ನೀವು ಇದ್ದರೆ ಅಲ್ಲಿಂದ ಬೇಗನೆ ಹೊರಬರುವುದು ಒಳ್ಳೆಯದು. ಏಕೆಂದರೆ ಸಿಡಿಲು ಮೋಡದಿಂದ ಭೂಮಿಗೆ ಹರಿಯಲು ಮರದಂತಹ ಹಸಿ, ಒದ್ದೆ ವಸ್ತುವನ್ನೇ ಆರಿಸಿಕೊಳ್ಳುತ್ತದೆ. ಎತ್ತರದ ಗುಡ್ಡದ ಮೇಲಿದ್ದರೆ ತಗ್ಗಿಗೆ ಇಳಿರಿ, ಕುರಿಮಂದೆ ಅಥವಾ ಜಾನುವಾರುಗಳ ಮಧ್ಯ ನಿಂತಿದ್ದರೆ ಅವುಗಳ ಮಧ್ಯದಲ್ಲಿ ಬಗ್ಗಿ ಕುಳಿತುಕೊಳ್ಳಿ, ಏಕೆಂದರೆ ಮಿಂಚು ಪ್ರಾಣಿಗಳಿಗಿಂತ ಎತ್ತರವಿರುವ ಮನುಷ್ಯನನ್ನೇ ಆರಿಸಿಕೊಳ್ಳುತ್ತದೆ.
ಕೆರೆಯಲ್ಲಿ ಈಜುವುದು, ಸ್ನಾನ ಮಾಡುವುದು ಬೇಡ, ನೀರಿನಲ್ಲಿದ್ದರೆ ತಕ್ಷಣ ಹೊರಬನ್ನಿ. ವಿದ್ಯುತ್ ಕಂಬ, ಎಲೆಕ್ಟ್ರಿಕಲ್ ಟವರ್, ಮೊಬೈಲ್ ಟವರ್ ಟ್ರಾನ್ಸ್‍ಫಾರ್ಮರ್ ಮುಂತಾದವುಗಳ ಹತ್ತಿರವೂ ಇರಬಾರದು. ಮಳೆ ಬರುವ ಸಮಯದಲ್ಲಿ ಮನೆಯ ಟೆರೇಸ್ ಅನ್ನು ಸ್ವಚ್ಛ ಮಾಡುವ ಸಾಹಸಬೇಡ ಎಂದು ಅವರು ತಿಳಿಸಿದ್ದಾರೆ.
ಮನೆಯ ಕಿಟಿಯ ಬಳಿ ನಿಲ್ಲುವುದಕ್ಕಿಂತಲೂ ಮನೆಯ ಮಧ್ಯದಲ್ಲಿರುವುದು ಸುರಕ್ಷಿತ. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಪೋನ್‍ನಲ್ಲಿ ಮಾತನಾಡಬಾರದು, ಅದನ್ನು ಚಾರ್ಚ್ ಮಾಡುವ ಸಾಹಸವೂ ಬೇಡ. ಕಾರಿನಲ್ಲಿ ಪ್ರಯಾಣಿಸುತ್ತಿದ್ದರೆ ಗಾಜನ್ನು ಮುಚ್ಚಿಕೊಳ್ಳಿ, ಕಾರಿನ ಬಾಡಿಯನ್ನು ಸಾಧ್ಯವಾದಷ್ಟು ಸ್ಪರ್ಶಿಸದೇ ಮಧ್ಯದಲ್ಲಿ ಕುಳಿತುಕೊಳ್ಳುವುದು ಒಳ್ಳೆಯದು ಮತ್ತು ಕಂಪ್ಯೂಟರ್, ಲ್ಯಾಪ್‍ಟ್ಯಾಪ್‍ಗಳಿಂದ ದೂರವಿರಬೇಕು. ಮನೆಯ ಕಾಂಕ್ರೀಟ್ ಗೋಡೆಗಳನ್ನು ಸ್ಪರ್ಶಿಸದೇ ಕೋಣೆಯ ಮಧ್ಯದಲ್ಲಿದ್ದರೆ ಹೆಚ್ಚು ಸುರಕ್ಷಿತ ಇರುತ್ತದೆ.

Public should note: Follow these measures to protect against 'thunderstorm' damage ಸಾರ್ವಜನಿಕರೇ ಗಮನಿಸಿ : ‘ಗುಡುಗು-ಸಿಡಿಲು’ ಹಾನಿಯಿಂದ ಸಂರಕ್ಷಣೆಗೆ ಈ ಕ್ರಮಗಳನ್ನು ಅನುಸರಿಸಿ
Share. Facebook Twitter LinkedIn WhatsApp Email

Related Posts

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

2 Mins Read

BREAKING: ಬೆಂಗಳೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಪತ್ನಿ ನೇಣಿಗೆ ಶರಣು

1 Min Read
Recent News

Eat Garlic Daily: ದಿನವೂ ಬೆಳ್ಳುಳ್ಳಿ ತಿಂದರೆ ದೇಹದಲ್ಲಿ ಏನಾಗುತ್ತದೆ? ಇಲ್ಲಿದೆ ಅಚ್ಚರಿಯ ಮಾಹಿತಿ!

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ದಿನಾ ಬಳಸಿದ್ರೂ ‘ಪಾಸ್‌ವರ್ಡ್’ ಮರೆತುಹೋಗುತ್ತಾ?: ಪ್ರತಿದಿನ ಟೈಪ್ ಮಾಡಿದ್ರೂ ಮರೆವಿನ ಆಟ ಶುರುವಾಗಲು ಅಸಲಿ ಕಾರಣ ಇಲ್ಲಿದೆ

State News
KARNATAKA

BREAKING: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಕಲಬುರಗಿ: ವೈದ್ಯಕೀಯ ಶಿಕ್ಷಣದ (MBBS) ಕನಸು ಹೊತ್ತಿದ್ದ ನೀಟ್ ಆಕಾಂಕ್ಷಿ, ಯುವತಿಯೊಬ್ಬಳು ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ…

Rain Alert: ಮೇ.29ರವರೆಗೆ ರಾಜ್ಯದಲ್ಲಿ ವರುಣನ ಆರ್ಭಟ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

BREAKING: ಬೆಂಗಳೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಕಾನ್ಸ್‌ಟೇಬಲ್ ಪತ್ನಿ ನೇಣಿಗೆ ಶರಣು

ಚಾಲಕನ ಮಾನವೀಯತೆಗೆ ಹೈಕೋರ್ಟ್ ಶ್ಲಾಘನೆ: ಅಪಘಾತದ ನಂತ್ರ ಗಾಯಾಳು ಆಸ್ಪತ್ರೆಗೆ ಸೇರಿಸಿದ್ದಕ್ಕೆ ಜೈಲು ಶಿಕ್ಷೆ ಕಡಿತ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.