ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮಳೆ ಸಂಬಂಧಿ ಅನಾಹುತಕ್ಕೆ ರಾಜ್ಯದಲ್ಲಿ ಬಾಲಕ ಸೇರಿ ಮತ್ತೆ ನಾಲ್ವರು ಬಲಿಯಾಗಿದ್ದಾರೆ.
ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಗದಗ, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ಬೆಂಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ.
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನರೋಣ ಗ್ರಾಮದಲ್ಲಿ ಬಾಲಕ ಮಹೇಶ್ (10), ಶಿವಮೊಗ್ಗ ತಾಲೂಕಿನ ಹರಮಘಟ್ಟದಲ್ಲಿ ರಾಕೇಶ್ (28), ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಪಾಲಡ್ಕ ನಿವಾಸಿ ನಿತಿನ್ (24) ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ಸುಳಿ ಗಾಳಿ ಪರಿಣಾಮ ರಾಜ್ಯದ ಒಳನಾಡು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ ಮುಂದಿನ ಎರಡು ದಿನಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳಲ್ಲಿ ಹಗುರ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.