ಮಂಡ್ಯ : ರಾಜ್ಯದ 1.20 ಕೋಟಿ ಕುಟುಂಬಗಳ ನಾಲ್ಕೂವರೆ ಕೋಟಿ ಜನರಿಗೆ ಗ್ಯಾರಂಟಿ ಸೌಲಭ್ಯ ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪ್ರಜಾಧ್ವನಿ-2 ಜನಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಕ್ತಿ ಯೋಜನೆಯಡಿ 191 ಕೋಟಿ ಮಹಿಳೆಯರು ಉಚಿತವಾಗಿ ಈವರೆಗೆ ಬಸ್ಸುಗಳಲ್ಲಿ ಪ್ರಯಾಣಿಸಿದ್ದಾರೆ. ಗೃಹಜ್ಯೋತಿ, 1.18 ಲಕ್ಷ ಕುಟುಂಬಗಳಿಗೆ ಗೃಹಲಕ್ಷ್ಮಿ ತಲುಪುತ್ತಿದೆ. ಪಿಯುಸಿ ನಲ್ಲಿ ರ್ಯಾಂಕ್ ಪಡೆದ ಹುಡುಗ ಕೂಡ ಈ ಬಗ್ಗೆ ಪ್ರಸ್ತಾಪ ಮಾಡಿರುವುದು ಇದರ ಉಪಯುಕ್ತತೆಯನ್ನು ಸಾರುತ್ತದೆ. ಅನ್ನಭಾಗ್ಯ , ಯುವನಿಧಿ ಯೋಜನೆಗಳು . 1.20 ಕೋಟಿ ಕುಟುಂಬಗಳ ನಾಲ್ಕೂವರೆ ಕೋಟಿ ಜನರಿಗೆ ಇದರಿಂದ ಉಪಯೋಗವಾಗುತ್ತಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಅನೇಕ ಭರವಸೆಗಳನ್ನು ಕೊಟ್ಟು ಭ್ರಮೆ ಹುಟ್ಟಿಸಿದರು ಎಂದರು.
ಮನ್ ಮೋಹನ್ ಸಿಂಗ್ ದೇಶ ಕಂಡ ದೊಡ್ಡ ಆರ್ಥಿಕ ತಜ್ಞ. ಅವರು ದೇಶವನ್ನು ಅಭಿವೃದ್ಧಿಯತ್ತ ಮುನ್ನಡೆಸುವ ಪ್ರಯತ್ನ ಮಾಡಿದರು. ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದರು. ಶಿಕ್ಷಣ ಹಕ್ಕು ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ, ಉದ್ಯೋಗ ಹಕ್ಕುಗಳನ್ನು ಮನ್ ಮೋಹನ್ ಸಿಂಗ್ ಜಾರಿಗೆ ತರುವ ಮೂಲಕ ಸಂವಿಧಾನದ ನಿರ್ದೇಶಕ ತತ್ವಗಳನ್ನು ಮೂಲಭೂತ ಹಕ್ಕುಗಳನ್ನಾಗಿಸಿದರು . ನರಸಿಂಹರಾವ್ ಸರ್ಕಾರದಲ್ಲಿ ಹಣಕಾಸಿನ ಸಚಿವರಾಗಿದ್ದ ಅವರು ದೇಶವನ್ನು ಆರ್ಥಿಕವಾಗಿ ಸಧೃಡವಾಗಿಸಿದರು ಎಂದರು.
ನರೇಂದ್ರ ಮೋದಿ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದರು. ಯಾರೂ ಬೇಕಾದರೂ ರೈತರ ಜಮೀನು ಕೊಂಡು, ರೈತರು ಭಿಕಾರಿಗಳಾಗುವಂತೆ ಮಾಡಿದರು. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿಸಿದರು ಎಂದರು.
ಕಾಂಗ್ರೆಸ್ ಪಕ್ಷ ಬಡವರಿಗೆ,ಮಧ್ಯಮವರ್ಗದವರಿಗೆ ಕೊಳ್ಳುವ ಶಕ್ತಿ ಹೆಚ್ಚಿಸಲು ಐದು ಗ್ಯಾರಂಟಿ ಗಳನ್ನು ಜಾರಿ ಮಾಡಿದೆ ಎಂದು ತಿಳಿಸಿದರು.
ಗ್ಯಾರಂಟಿ ಗಳು ನಿಲ್ಲುವುದಿಲ್ಲ
ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಕಾಂಗ್ರೆಸ್ ಗ್ಯಾರಂಟಿಗಳು ತಾತ್ಕಾಲಿಕ , ಬಿಜೆಪಿಯದ್ದು ಶಾಶ್ವತ ಎಂದು ಹೇಳಿದ್ದಾರೆ. 2024-25 ರ ಬಜೆಟ್ ನಲ್ಲಿ 52 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ ಎಂದರು.ಯಾವ ಕಾರಣಕ್ಕೂ ಗ್ಯಾರಂಟಿಗಳು ನಿಲ್ಲುವುದಿಲ್ಲ ಎಂದರು.