ಬೆಂಗಳೂರು : ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ತುಮಕೂರಿನಲ್ಲಿ ಎಫ್ ಐಆರ್ ದಾಖಲಾಗಿದೆ.
ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ. ಏಪ್ರಿಲ್ 13 ರಂದು ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪರ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು ಡಿ.ಕೆ. ಸುರೇಶ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು ಎಂದು ಆರೋಪಿಸಿ ಕಾಂಗ್ರೆಸ್ ದೂರು ನೀಡಿದೆ.
ಡಿ.ಕೆ. ಸುರೇಶ್ ಕೋತ್ವಾಲ್ ರಾಮಚಂದ್ರನ ಗರಡಿಯಿಂದ ಬಂದವರು ಹಣದ ದಾಹಕ್ಕೆ ಏನು ಬೇಕಾದ್ರೂ ಅವರು ಮಾಡುತ್ತಾರೆ. ಪ್ರಕೃತಿ ಸಂಪತ್ತು ವಿದೇಶಿಗಳಿಗೆ ಮಾರಾಟ ಮಾಡಿ ಹಣ ಮಾಡಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದರು.