ಮೈಸೂರು : ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿದ್ರೆ ಜನರು ಬಡಿಗೆಗಳಿಂದ ಬಡಿಯುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿದ್ರೆ ಜನರು ಬಡಿಗೆಗಳಿಂದ ಬಡಿಯುತ್ತಾರೆ. ಈ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಗ್ಯಾರಂಟಿ ಬಗ್ಗೆ ಹೇಳಿಕೊಳ್ಳುವುದನ್ನು ಬಿಟ್ಟರೆ ಬೇರೆ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಅಭಿವೃದ್ಧಿಗೆ ಒಂದು ನಯಾಪೈಸೆಯೂ ಬಿಡುಗಡೆ ಆಗಿಲ್ಲ. ಕೇವಲ ಗ್ಯಾರಂಟಿ ಜಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.