ರಾವಲ್ಪಿಂಡಿ: ಪಾಕಿಸ್ತಾನದಲ್ಲಿ ಮಹಿಳೆಯೊಬ್ಬರು ಒಂದೇ ಬಾರಿಗೆ ಆರು ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆ ನಡೆದಿದೆ. 27 ವರ್ಷದ ಮಹಿಳೆ ರಾವಲ್ಪಿಂಡಿಯ ಆಸ್ಪತ್ರೆಯಲ್ಲಿ ನಾಲ್ಕು ಗಂಡು ಮತ್ತು ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಮೊಹಮ್ಮದ್ ವಹೀದ್ ಅವರ ಪತ್ನಿ ಜೀನತ್ ವಹೀದ್ ಎಂದು ಗುರುತಿಸಲ್ಪಟ್ಟ ಮಹಿಳೆ ಶುಕ್ರವಾರ (ಏಪ್ರಿಲ್ 19) ಜಿಲ್ಲಾ ಆಸ್ಪತ್ರೆಯಲ್ಲಿ ಮಕ್ಕಳಿಗೆ ಜನ್ಮ ನೀಡಿದ್ದಾರೆ ಎಂದು ವರದಿಗಳಿವೆ. ಜೀನತ್ ಒಂದು ಗಂಟೆಯ ಅವಧಿಯಲ್ಲಿ ಎಲ್ಲಾ ಆರು ಮಕ್ಕಳಿಗೆ ಒಂದರ ನಂತರ ಒಂದರಂತೆ ಜನ್ಮ ನೀಡಿದರು ಎನ್ನಲಾಗಿದೆ.
ವರದಿಗಳ ಪ್ರಕಾರ, ರಾವಲ್ಪಿಂಡಿಯ ಹಾಜಿರಾ ಕಾಲೋನಿ ನಿವಾಸಿ ಜೀನತ್ ವಹೀದ್ ಗರ್ಭಿಣಿಯಾಗಿದ್ದು, ಹೆರಿಗೆ ನೋವು ಕಾಣಿಸಿಕೊಂಡ ನಂತರ ಗುರುವಾರ (ಏಪ್ರಿಲ್ 18) ಜಿಲ್ಲಾ ಆಸ್ಪತ್ರೆಗೆ ಕರೆತರಲಾಯಿತು ಎನ್ನಲಾಗಿದೆ. ಆರು ಶಿಶುಗಳಲ್ಲಿ ನಾಲ್ಕು ಗಂಡು ಮತ್ತು ಇಬ್ಬರು ಬಾಲಕಿಯರು ಸೇರಿದ್ದಾರೆ ಎಂದು ಆಸ್ಪತ್ರೆಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ತಾಯಿ ಸೇರಿದಂತೆ ಎಲ್ಲಾ ಶಿಶುಗಳು ಸ್ಥಿರ ಸ್ಥಿತಿಯಲ್ಲಿವೆ ಎಂದು ಅವರು ಹೇಳಿದರು. ಶಿಶುಗಳು ಉತ್ತಮ ಆರೋಗ್ಯದಲ್ಲಿದ್ದಾರೆ ಮತ್ತು ಅವರೆಲ್ಲರೂ ತಲಾ ಎರಡು ಪೌಂಡ್ ಗಳಿಗಿಂತ ಕಡಿಮೆ ತೂಕ ಹೊಂದಿದ್ದಾರೆ ಎನ್ನಲಾಗಿದೆ.