ನವದೆಹಲಿ: ಛತ್ತೀಸ್ಗಢದ ಬಸ್ತಾರ್ ಜಿಲ್ಲೆಯಲ್ಲಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಕನಿಷ್ಠ 10 ಸಿಆರ್ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಭಾನುವಾರ ಬಸ್ ಚುನಾವಣಾ ಕರ್ತವ್ಯದಲ್ಲಿದ್ದ ಯೋಧರನ್ನು ಕರೆದೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಛತ್ತೀಸ್ಗಢದಲ್ಲಿ ಪಲ್ಟಿಯಾಗಿದೆ. ಛತ್ತೀಸ್ಗಢದ ಬಸ್ತಾರ್ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕಾಗಿ ಸಿಆರ್ಪಿಎಫ್ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ 10 ಸಿಆರ್ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.