ಹುಬ್ಬಳ್ಳಿ: ಜಿಲ್ಲೆಯ ಜನರು ಬೆಚ್ಚಿ ಬೀಳುವಂತೆ ಮಾಡಿದ್ದಂತ ನೇಹಾ ಕೊಲೆ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಇಂತಹ ಪೊಲೀಸರಿಗೆ ಇಲಾಖೆಯಿಂದ ಕಾಪ್ ಆಫ್ ದಿ ಮಂತ್ ಅವಾರ್ಡ್ ನೀಡಿ ಗೌರವಿಸಲಾಗಿದೆ.
ಹುಬ್ಬಳ್ಳಿಯ ಕಾರ್ಪೋರೇಟರ್ ಪುತ್ರಿ ನೇಹಾ ಕೊಲೆ ಪ್ರಕರಣ ಆರೋಪಿ ಪತ್ತೆಗಾಗಿ ಹುಬ್ಬಳ್ಳಿಯ ಉತ್ತರ ಉಪ ವಿಭಾಗದ ಎಸಿಪಿ ಶಿವಪ್ರಕಾಶ ನಾಯಕ್, ವಿದ್ಯಾನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಡಿ.ಕೆ ಪಾಟೀಲ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು.
ಈ ವಿಶೇಷ ತಂಡವು ವಿವಿಧ ಹಂತಗಳಲ್ಲಿ ತನಿಖೆ ನಡೆಸಿ, ನೇಹಾಳನ್ನು ಕಾಲೇಜಿನಲ್ಲೇ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಂತ ಫಯಾಜ್ ಬಾಬು ಸಾಹೇಬ ಖೊಂದು ನಾಯಕ(23) ಎಂಬಾದನನ್ನು ಬೆನ್ನತ್ತಿ ಹಿಡಿದಿತ್ತು. ನೇಹಾಳನ್ನು ಹತ್ಯೆ ಮಾಡಿದ ಕೇವಲ ಒಂದೇ ಗಂಟೆಯಲ್ಲೇ ಆರೋಪಿಯನ್ನು ಹಿಡಿದು ಯಶಸ್ವಿಯಾಗಿದ್ದರು.
ಬಂಧಿತ ಆರೋಪಿ ಫಯಾಜ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಯಶಸ್ಸು ಸಾಧಿಸಿದ್ದಂತ ಪೊಲೀಸ್ ತಂಡಕ್ಕೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಪ್ರಶಂಸಿಸಿ, ಉತ್ತರ ಉಪ ವಿಭಾಗದ ಎಸಿಪಿ ಹಾಗೂ ವಿದ್ಯಾನಗರ ಪೊಲೀಸ್ ಠಾಣೆಯ ಪಿಐ ನೇತೃತ್ವದ ತಂಡಕ್ಕೆ ಕಾಪ್ ಆಫ್ ದಿ ಮಂತ್ ಎಂಬುದಾಗಿ ಅವಾರ್ಡ್ ನೀಡಿದೆ. ಅಲ್ಲದೇ 25 ಸಾವಿರ ರೂಪಾಯಿ ನಗದು ಬಹುಮಾನ, ಪ್ರಶಂಸನಾ ಪತ್ರ ನೀಡಿ ಶ್ಲಾಘಿಸಿದ್ದಾರೆ.
‘ನೇಹಾ ಹಿರೇಮಠ ತಂದೆ’ಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ ‘ಡಿಸಿಎಂ ಡಿ ಕೆ ಶಿವಕುಮಾರ್’
ಕರ್ನಾಟಕಕ್ಕೆ ಪ್ರಧಾನಿ ಮೋದಿ ಚೊಂಬು ಕೊಟ್ಟಿದ್ದಾರೆ: ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ!