ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅನಾರೋಗ್ಯದ ಕಾರಣ ಇಂದು ಮಧ್ಯಪ್ರದೇಶ ಮತ್ತು ಜಾರ್ಖಂಡ್ನಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡುವುದಿಲ್ಲ ಎಂದು ಪಕ್ಷದ ಹಿರಿಯ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ.
ರಾಹುಲ್ ಗಾಂಧಿ ಇಂದು ಮಧ್ಯಪ್ರದೇಶದ ಸತ್ನಾ ಮತ್ತು ಜಾರ್ಖಂಡ್ನ ರಾಂಚಿಯಲ್ಲಿ ಪ್ರಚಾರ ನಡೆಸಬೇಕಿತ್ತು.
“ರಾಹುಲ್ ಗಾಂಧಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರು ಪ್ರಸ್ತುತ ದೆಹಲಿಯನ್ನು ಬಿಡಲು ಸಾಧ್ಯವಾಗುವುದಿಲ್ಲ. ಸತ್ನಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಂಚಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ” ಎಂದು ರಮೇಶ್ ಹೇಳಿದ್ದಾರೆ.
श्री राहुल गांधी आज सतना और रांची में चुनाव प्रचार के लिए पूरी तरह से तैयार थे, जहां INDIA की रैली हो रही है। लेकिन वह अचानक बीमार हो गए हैं और फिलहाल नई दिल्ली से बाहर नहीं जा सकते हैं। कांग्रेस अध्यक्ष श्री मल्लिकार्जुन खरगे जी अवश्य सतना में जनसभा को संबोधित करने के बाद रांची…
— Jairam Ramesh (@Jairam_Ramesh) April 21, 2024
ಸೋನಿಯಾ ಗಾಂಧಿ, ಪಕ್ಷದ ಸಂಸದ ರಾಹುಲ್ ಗಾಂಧಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಅವರ ಪತ್ನಿ ಕಲ್ಪನಾ ಸೊರೆನ್ ಸೇರಿದಂತೆ ಬಿಜೆಪಿ ನಾಯಕರ ಪೋಸ್ಟರ್ಗಳನ್ನು ರಾಂಚಿಯಲ್ಲಿ ಹಾಕಲಾಗಿದೆ.
ಖರ್ಗೆ ಅವರಲ್ಲದೆ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಮತ್ತು ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ರಾಂಚಿಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ.
ನಿರುದ್ಯೋಗಿ ಯುವಕ, ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ?-ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಕರ್ನಾಟಕಕ್ಕೆ ಪ್ರಧಾನಿ ಮೋದಿ ಚೊಂಬು ಕೊಟ್ಟಿದ್ದಾರೆ: ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ!