ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಈ ನಡುವೆ ಮುಸ್ಲಿಂ ಸಂಘಟನೆ ಇಂದು ಅರ್ಧ ದಿನ ಧಾರವಾಡ ಬಂದ್ ಗೆ ಕರೆ ಕೊಟ್ಟಿವೆ.
ನೇಹಾ ಹತ್ಯೆ ಖಂಡಿಸಿ ಇಂದು ಅರ್ಧ ದಿನ ಧಾರವಾಡ ಬಂದ್ ಗೆ ಕರೆ ನೀಡಲಾಗಿದ್ದು, ಮುಸ್ಲಿಮರು ತಮ್ಮ ಅಂಗಡಿ, ಮುಂಗಟ್ಟು ಬಂದ್ ಮಾಡಿ ಬಂದ್ ಗೆ ಬೆಂಬಲ ನೀಡುವುದಾಗಿ ಅಂಜುಮನ್ ಸಂಸ್ಥೆ ಘೋಷಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್, ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿರುವುದು ದುರ್ದೈವದ ಸಂಗತಿ. ನಮ್ಮ ಮಹಾನಗರದಲ್ಲಿ ಇಂತಹ ಘಟನೆ ನಡೆಯಬಾರದಿತ್ತು. ಘಟನೆಯನ್ನು ಖಂಡಿಸುತ್ತೇವೆ. ನಮ್ಮ ಸಮುದಾಯದಿಂದ ಸೋಮವಾರ ಅರ್ಧ ದಿನ ಸ್ವಯಂ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುತ್ತೇವೆ. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ರವರೆಗೆ ಅಂಗಡಿ ಧಾರವಾಡ ಬಂದ್ ಇರಲಿದೆ. ಅಂಗಡಿಗಳ ಮೇಲೆ ಜಸ್ಟೀಸ್ ಫಾರ್ ನೇಹಾ ಅಂತ ಸ್ಟಿಕ್ಕರ್ ಹಚ್ಚುತ್ತೇವೆ