ಧಾರವಾಡ : ಧಾರವಾಡ ಲೋಕಸಭಾ ಕಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಿಂಗಾಲೇಶ್ವರ ಶ್ರೀ ಇಂದು ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿದ್ದು, ಶಿರಹಟ್ಟಿ ಮಠದ ಹಿರಿಯ ಪೀಠಾಧಿಪತಿ ಫಕ್ಕೀರ ಶಿವಯೋಗಿ ಸಿದ್ದರಾಮ ಶ್ರೀಗಳ ಸೂಚನೆ ಮೇರೆಗೆ ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿಗೆ ಬಿಜೆಪಿ ಟಿಕೆಟ್ ವಿರೋಧಿಸಿ ದಿಂಗಾಲೇಶ್ವರ ಶ್ರೀ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು, ನಾಮಪತ್ರ ಸಲ್ಲಿಸಿದ್ದರು.