ಶಿವಮೊಗ್ಗ: ನೇಹಾ ಹತ್ಯೆ ಕೇಸ್ ಸಿಐಡಿಗೆ ವಹಿಸಲಿದೆ ಅಂತ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು ಅಂತ ಅವರು ಇದೇ ವೇಳೆ ಅವರು ಹೇಳಿದರು.
ಇನ್ನೂ ಶೀಘ್ರದಲ್ಲಿ ನೇಹಾಳ ಹತ್ಯೆ ಕೇಸ್ ಅನ್ನು ಸಿಐಡಿ ಅಧಿಕಾರಿಗಳು ನಡೆಸಲಿದ್ದು, ಈ ಬಗ್ಗೆ ಆದೇಶವನ್ನು ಪೊಲೀಸ್ ಹಿರಿಯ ಅಧಿಕಾರಿಗಳು ಇಂದು ಸಂಜೆಯೊಳಗೆ ಹೊರಡಿಸಲಿದ್ದಾರೆ ಎನ್ನಲಾಗಿದೆ. ಇನ್ನೇರೆಡು ದಿನದಲ್ಲಿ ಹತ್ಯೆಗೆ ಸಂಬಂಧಪಟ್ಟಂತೆ ಸ್ಥಳೀಯ ಪೊಲಿಸ್ ಅಧಿಕಾರಿಗಳಿಂದ ಸಿಐಡಿಗಳು ಮಾಹಿತಿಯನ್ನು ಪಡೆದುಕೊಂಡು ಬಳಿಕ ತನಿಖೆಯನ್ನು ಶುರುಮಾಡಲಿದ್ದಾರೆ. ಸಿಐಡಿಯಲ್ಲಿ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೇ ಇರಲಿದ್ದಾರೆ.
ಈ ನಡುವೆ , ನೇಹಾಳನ್ನು 9 ಅಲ್ಲ ಬದಲಾಗಿ 14 ಬಾರಿ ಚುಚ್ಚಿ ಕೊಂದಿದ್ದಾನೆ. ನೇಹಾ ಹಿರೇಮಠ ದೇಹದ ಮೇಲೆ 14 ಗಾಯಗಳ ಗುರುತು ಪತ್ತೆಯಾಗಿದೆ ಎನ್ನಲಾಗಿದೆ. ಇದಲ್ಲದೇ ಕುತ್ತಿಗೆಗೆ ಹಲವು ಬಾರಿ ಇರಿದಿದ್ದರಿಂದ ರಕ್ತನಾಳ ತುಂಡಾಗಿ ವಿಪರೀತ ರಕ್ತಸ್ರಾವವಾಗಿದೆ, ಹೀಗಾಗಿ ರಕ್ತಸ್ರಾವದಿಂದಲೇ ಆಕೆ ಸಾವನ್ನಪ್ಪಿದ್ದಾಳೆ ಎನ್ನುವ ಆಘಾತಕಾರಿ ಮಾಹಿತಿ ಹೊರಬಿದಿದ್ದೆ. ಏ.18 ರ ಗುರುವಾರ ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರಾದ ನಿರಂಜನ್ ಹಿರೇಮಠ್ ಅವರ ಪುತ್ರಿ, ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಮಾಡಿದನ್ನು. ಸದ್ಯ ಆರೋಪಿ ಫಯಾಜ್ ನ್ಯಾಯಾಂಗ ಬಂಧನಲ್ಲಿದ್ದಾನೆ.