ಹಾವೇರಿ: ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯ ಹಿಂದೆ ದೊಡ್ಡ ಷಡ್ಯಂತ್ರ ಇದ್ದು, ಇದು ವಯಕ್ತಿಕ ವಿಚಾರವಲ್ಲ. ಇದರ ಹಿಂದೆ ದೇಶದ ಸಾಮಾಜಿಕ ವಿಚಾರ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅವರು ಇಂದು ಹಾವೇರಿಯಲ್ಲಿ ನೇಹಾ ಹತ್ಯೆ ಖಂಡಿಸಿ ಅಖಿಲ ಭಾರತಿಯ ವಿದ್ಯಾರ್ಥಿ ಪರಿಷತ್ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನಾವು ಅತ್ಯಂತ ದುಖ ಆಘಾತದ ಸಂದರ್ಭದಲ್ಲಿ ಸೇರಿದ್ದೇವೆ. ಹೆಣ್ಸು ಮಕ್ಕಳು ಮಾತನಾಡಿದ್ದು ಕರಳು ಕಿತ್ತು ಬರುವಂತಿದೆ. ಅವನು ಹಾಡಹಗಲೆ ಭಯಂಕರ ಕೊಲೆ ಮಾಡಿದ್ದಾನೆ ಎಂದರೆ ಅವನು ಒಬ್ಬನೇ ಇಲ್ಲ. ಇದು ಕೇವಲ ವಯಕ್ತಿಕ ವಿಚಾರ ಅಲ್ಲ. ಇದರ ಹಿಂದೆ ದೇಶದ ಸಾಮಾಜಿಕ ವಿಚಾರ ಇದೆ ಎಂದು ಹೇಳಿದರು.
ನಾವು ಅಧಿಕಾರದಲ್ಲಿ ಇದ್ದಾಗ ಚಿಕ್ಕಮಗಳೂರಿನಲ್ಲಿ ಅಮಾಯಕ ಮಹಿಳೆಯ ಮೇಲೆ ಅತ್ಯಾಚಾರ ನಡೆದಾಗ ಅವನನ್ನು ಗಲ್ಲಿಗೇರಿಸುವಂತೆ ಕ್ರಮ ಕೈಗೊಂಡಿದ್ದೇವು. ನೇಹಾ ತಂದೆ ರಾಜ್ಯದ ಪೊಲಿಸರ ಮೇಲೆ ನಂಬಿಕೆ ಇಲ್ಲ ಅಂತ ಹೇಳಿದ್ದಾರೆ. ರಾಜ್ಗ ಸರ್ಕಾರದ ನಡವಳಿಕೆ ಅವರಿಗೆ ಬೇಸರ ತರಿಸಿದೆ. ಈ ಪ್ರಕರಣವನ್ಬು ಸಿಬಿಐಗೆ ಕೊಡಬೇಕು ಎಂದು ಹೆಳಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಿ ನೇಹಾಗೆ ನ್ಯಾಯ ಸಿಗುವವರೆಗೂ ನಾವು ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಇದೊಂದೆ ಪ್ರಕರ ಅಲ್ಲ. ಹಾವೇರಿಯಲ್ಲಿ ಅಲ್ಪ ಸಂಖ್ಯಾತರ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದಾಗ ರಾಜ್ಯ ಸರ್ಕಾರ ಅವರನ್ನು ರಕ್ಷಿಸುವ ಕೆಲಸ ಮಾಡಿದ್ದರು. ಆ ಮಹಿಳೆ ಬಹಿರಂಗವಾಗಿ ಹೇಳಿಕೆ ಕೊಟ್ಟ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದರು. ರಾಜ್ಯದಲ್ಲಿ ಒಂದೇ ಕೊಮಿನ ಹೆಣ್ಣು ಮಕ್ಕಳು ಯಾಕೆ ಸಾಯುತ್ತಿದ್ದಾರೆ. ಇದರ ಹಿಂದೆ ದೊಡ್ಡ ಷಡ್ಯಂತ್ರ ಇದೆ ಎಂದರು.
ಪ್ರತಿ ಮನೆಯ ಹೆಣ್ಣು ಮಗಳು ನಮ್ಮ ಮಕ್ಕಳು, ಎಲ್ಲ ಕಡೆ ಹೆಣ್ಣು ಮಕ್ಕಳು ಅವನನ್ನು ಗಲ್ಲಿಗೇರಿಸುವಂತೆ ಆಗ್ರಹಿಸುತ್ತಿದ್ದಾರೆ. ಇದೊಂದು ಅಗ್ನಿಕುಂಡವಾಗಿದೆ. ರಾಜ್ಯ ಸರ್ಕಾರ ಎಚ್ಷೆತ್ತುಕೊಳ್ಳಬೇಕು. ರಾಜ್ಯ ಜಂಗಲ್ ರಾಜ್ ಆಗಿದೆ. ಸಿಎಂ ಒಂದು ಟ್ವೀಟ್ ಮಾಡಿ ಕೈತೊಳೆದುಕೊಳ್ಳುತ್ತಿದ್ದಾರೆ. ಅಲ್ಲದೇ ಅವಳ ಬಗ್ಗೆ ಅನಗತ್ಯ ಆರೋಪ ಮಾಡುವ ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದಾರೆ. ಈ ಬಗ್ಗೆಯೂ ತನಿಖೆ ಆಗಬೇಕು. ನಾವು ವಿದ್ಯಾರ್ಥಿಗಳ ಹೋರಾಟದ ಜೊತೆಗಿದ್ದೇವೆ. ಈಗ ನಡೆಯುತ್ತಿರುವುದು ಜನ ಶಕ್ತಿ ಮತ್ತು ಅಧಿಕಾರ ಶಕ್ತಿ ನಡುವೆ ನಡೆಯುವ ಹೋರಾಟ. ಜನಶಕ್ತಿಯ ಹೋರಾಟಕ್ಕೆ ಯಾವಾಗಲೂ ಜಯ ಸಿಗುತ್ತದೆ. ಆರೋಪಿಗೆ ತಕ್ಕ ಶಿಕ್ಷೆಯಾಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.
ಬಿಜೆಪಿಯವರ ಮೇಲೆ ‘ಐಟಿ, ಇಡಿ ರೈಡ್’ ಆಗುವುದಿಲ್ಲ ಏಕೆ.?- ಸಿಎಂ ಸಿದ್ಧರಾಮಯ್ಯ ಪ್ರಶ್ನೆ
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ