ಮಂಡ್ಯ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗ ಸಭೆ ನಡೆಯಲಿದ್ದು, ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅಂತಿಮ ಸಿದ್ಧತೆ ಪರಿಶೀಲನೆ ನಡೆಸಿದರು.
ಸೋಮವಾರ ಮಧ್ಯಾಹ್ನ ಕ್ರೀಡಾಂಗಣಕ್ಕೆ ಆಗಮಿಸಿದ ಡಿ.ಸಿ.ತಮ್ಮಣ್ಣ ಅವರು ಬಹಿರಂಗ ಸಭೆಗೆ ಸಿದ್ದವಾಗುತ್ತಿರುವ ವೇದಿಕೆ, ಪಾರ್ಕಿಂಗ್ ವ್ಯವಸ್ಥೆ, ಆಸನ ವ್ಯವಸ್ಥೆಗಳನ್ನು ಖುದ್ದು ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಡಿ.ಸಿ.ತಮ್ಮಣ್ಣ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಬೃಹತ್ ಚುನಾವಣೆ ಪ್ರಚಾರ ಸಭೆಯಲ್ಲಿ ಸಂಜೆ 5 ಗಂಟೆಗೆ ಪಾಲ್ಗೋಳಲಿದ್ದು, ಇವರ ಜೊತೆ ಜೆಡಿಎಸ್ ಹಾಗೂ ಬಿಜೆಪಿಯ ರಾಜ್ಯ ನಾಯಕರುಗಳು ಆಗಮಿಸಲಿದ್ದು, ಕಾರ್ಯಕ್ರಮದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಸಾರ್ವಜನಿಕರು, ಜೆಡಿಎಸ್, ಬಿಜೆಪಿ ನಾಯಕರು, ಕಾರ್ಯಕರ್ತರು ಆಗಮಿಸಲಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಉಪಾಧ್ಯಕ್ಷ ದೇವರಹಳ್ಳಿ ವೆಂಕಟೇಶ್, ಪುರಸಭಾ ಸದಸ್ಯರಾದ ಎಸ್.ಮಹೇಶ್, ವನಿತಾ ಮುಖಂಡರಾದ ಚನ್ನಸಂದ್ರ ರವಿ, ಬ್ಯಾಡರಹಳ್ಳಿ ರಾಮಕೃಷ್ಣ, ದೇವರಾಜ್, ಸಿಂಧು, ಉಮೇಶ್ ಮಧು ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಜನಾಶೀರ್ವಾದ ಇರೋವರೆಗೂ ‘ಡಿಕೆಶಿ’ಯನ್ನು ಯಾರೂ ಏನೂ ಮಾಡೋಕೆ ಸಾಧ್ಯವಿಲ್ಲ- ಡಿ.ಕೆ ಸುರೇಶ್
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ