ಬೆಂಗಳೂರು: ಪ್ರಧಾನಮಂತ್ರಿಗಳು ಹಾಗೂ ಗೃಹ ಮಂತ್ರಿಗಳು ಮೊದಲು ಒಕ್ಕೂಟ ವ್ಯವಸ್ಥೆಯನ್ನು ಗೌರವಿಸುವುದನ್ನು ಕಲಿಯಬೇಕು. ಕನ್ನಡಿಗರು ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಎಂದಿಗೂ ಸಹಿಸುವುದಿಲ್ಲ ಎಂಬುದಾಗಿ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಹೇಳಿದ್ದಾರೆ.
ಇಂದು ಎಕ್ಸ್ ಮಾಡಿರುವಂತ ಅವರು, ಇಂದು ನಮ್ಮ ರಾಜ್ಯದ ರೈತರಿಗೆ ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ರವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ರೈತಪರ ಹೋರಾಟಕ್ಕೆ ಜಯ ಸಿಕ್ಕಿದೆ ಎಂಬುದಾಗಿ ತಿಳಿಸಿದ್ದಾರೆ.
ರಾಜ್ಯಕ್ಕೆ ಬರಬೇಕಾಗಿದ್ದ 18,172 ಕೋಟಿ ಬರ ಪರಿಹಾರ ತಡೆಯಲು ಷಡ್ಯಂತ್ರ ನಡೆಸಿದ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇಂದು ಮುಖಭಂಗವಾಗಿದೆ. ಬರ ಪರಿಹಾರ ವಿಚಾರವಾಗಿ ನ್ಯಾಯಾಲಯದ ಮೊರೆ ಹೋಗಿದ್ದ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಜಯ ಸಿಕ್ಕಿದ್ದು ಈ ಮೂಲಕ ಪ್ರಧಾನಮಂತ್ರಿಗಳು ಗೃಹಮಂತ್ರಿಗಳ ರೈತ ವಿರೋಧಿ ನಿಲುವಿಗೆ ನ್ಯಾಯಾಲಯವು ತಕ್ಕ ಪಾಠ ಕಲಿಸಿದೆ ಎಂದು ಹೇಳಿದ್ದಾರೆ.
ಇಂದು ನಮ್ಮ ರಾಜ್ಯದ ರೈತರಿಗೆ ಮತ್ತು ಮುಖ್ಯಮಂತ್ರಿ ಶ್ರೀ @siddaramaiah ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ @DKShivakumar ರವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ರೈತಪರ ಹೋರಾಟಕ್ಕೆ ಜಯ ಸಿಕ್ಕಿದೆ.
ರಾಜ್ಯಕ್ಕೆ ಬರಬೇಕಾಗಿದ್ದ 18,172 ಕೋಟಿ ಬರ ಪರಿಹಾರ ತಡೆಯಲು ಷಡ್ಯಂತ್ರ ನಡೆಸಿದ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇಂದು… pic.twitter.com/vKPndCGruZ
— Randeep Singh Surjewala (@rssurjewala) April 22, 2024
ವೈದ್ಯರ ದೈನಂದಿನ ಸಮಾಲೋಚನೆಗಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಮನವಿ ತಿರಸ್ಕರಿಸಿದ ದೆಹಲಿ ಕೋರ್ಟ್
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ