ಬೆಂಗಳೂರು : ರಾಜ್ಯದಲ್ಲಿ ಮೇ. 7 ರಂದು 2 ನೇ ಹಂತದಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ನಾಮಪತ್ರ ವಾಪಸ್ ಅಂತ್ಯವಾಗಿದ್ದು, ಕಣದಲ್ಲಿ 227 ಅಭ್ಯರ್ಥಿಗಳಿದ್ದಾರೆ. 45 ಮಂದಿ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ.
ಮೇ 7 ರಂದು ಚುನಾವಣೆ ನಡೆಯುತ್ತಿದ್ದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಏಪ್ರಿಲ್ 22 ರಂದು 45 ಅಭ್ಯರ್ಥಿಗಳು ಉಮೇದುವಾರಿಕೆ ವಾಪಸ್ ಪಡೆಯುವ ಮೂಲಕ ಚುನಾವಣಾ ಕಣದಲ್ಲಿ 227 ಅಭ್ಯರ್ಥಿಗಳಿದ್ದಾರೆ.
ದಾವಣಗೆರೆ ಲೋಕಸಭಾ ಚುನಾವಣೆ, ಅಂತಿಮ ಕಣದಲ್ಲಿ 30 ಅಭ್ಯರ್ಥಿಗಳು
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಚುನಾವಣೆ ನಡೆಯುತ್ತಿದ್ದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಏಪ್ರಿಲ್ 22 ರಂದು 3 ಅಭ್ಯರ್ಥಿಗಳು ಉಮೇದುವಾರಿಕೆ ವಾಪಸ್ ಪಡೆಯುವ ಮೂಲಕ ಚುನಾವಣಾ ಕಣದಲ್ಲಿ 30 ಅಭ್ಯರ್ಥಿಗಳಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.