ಬೆಂಗಳೂರು: ನಗರದ ಬಿನ್ನಿಮಿಲ್ ಸಮೀಪದ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಕಾರೊಂದರಲ್ಲಿ ಸಾಗಿಸುತ್ತಿದ್ದ 2 ಕೋಟಿ ರೂ ನಗದು ಹಣ ಬಿಜೆಪಿಗೆ ಸೇರಿರುವುದು ಖಚಿತವಾಗಿದೆ. ಈ ಸಂಬಂಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಬಿಜೆಪಿ ರಾಜ್ಯ ಕಚೇರಿ ಕಾರ್ಯದರ್ಶಿ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಮೂಲಕ ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಚುನಾವಣಾ ಆಯೋಗ ಬಿಗ್ ಶಾಕ್ ನೀಡಿದೆ.
ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಬಿನ್ನಿಮಿಲ್ ಸಮೀಪದ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಚುನಾವಮಾ ಆಯೋಗವು ತಪಾಸಣಾ ಕೇಂದ್ರ ತೆರೆದಿತ್ತು. ಏಪ್ರಿಲ್.20ರಂದು ಸಂಜೆ ಸುಮಾರು 4 ಗಂಟೆಗೆ ಆ ಮಾರ್ಗದಲ್ಲಿ ಬರುತ್ತಿದ್ದ ಕಾರೊಂದನ್ನು ಸ್ಥಿರ ಕಣ್ಗಾವಲು ತಂಡ ಹಾಗೂ ಪೊಲೀಸರು ತಪಾಸಣೆ ನಡೆಸಿದಾಗ 2 ಕೋಟಿ ನಗದು ಹಣವಿದ್ದ ಎರಡು ಬ್ಯಾಗ್ ಗಳು ಪತ್ತೆಯಾಗಿದ್ದವು.
ಕಾರಿನಲ್ಲಿ ಪತ್ತೆಯಾದಂತ ಹಣದ ಬ್ಯಾಗ್ ಬಗ್ಗೆ ಕಾರಿನ ಚಾಲಕನನ್ನು ವಿಚಾರಣೆ ಮಾಡಿದಾಗ, ಹಣವನ್ನು ಮೈಸೂರಿಗೆ ಸಾಗಿಸುತ್ತಿರುವುದಾಗಿ ಹೇಳಿ, ಬಿಜೆಪಿ ಪತ್ರವನ್ನು ಹಾಜರುಪಡಿಸಿದ್ದರು.
ಇದೀಗ ಕಾರಿನಲ್ಲಿ ಪತ್ತೆಯಾದ 2 ಕೋಟಿ ಹಣ ಸಂಬಂಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇಂದು ಮಧ್ಯರಾತ್ರಿ ಐತಿಹಾಸಿಕ ‘ಬೆಂಗಳೂರು ಕರಗ’ ಶಕ್ತ್ಯೋತ್ಸವ: 8 ಲಕ್ಷ ಜನರು ಭಾಗಿ ನಿರೀಕ್ಷೆ
ಮತದಾರರ ಗಮನಕ್ಕೆ : ಮೊಬೈಲ್ ನಲ್ಲೇ ‘ವೋಟರ್ ಸ್ಲಿಪ್’ ಡೌನ್ಲೋಡ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ