ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ ನಂಜುಂಡಿ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಬಿಜೆಪಿಗೆ ಬಿಗ್ ಶಾಕ್ ಅನ್ನು ಕೆ.ಪಿ ನಂಜುಂಡಿ ನೀಡಿದ್ದಾರೆ.
ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯ ನಿರ್ಧಾರವನ್ನು ಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಕೈಗೊಂಡಿದ್ದರು. ಇದೇ ಕಾರಣಕ್ಕಾಗಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೆ.ಪಿ ನಂಜುಂಡಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾದಂತ ಅವರು, ತಮ್ಮ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅಂದಹಾಗೇ ಬಿಜೆಪಿಗೆ ಗುಡ್ ಬೈ ಹೇಳಲಿರುವಂತ ಕೆ.ಪಿ ನಂಜುಂಡಿ, ಕಾಂಗ್ರೆಸ್ ಪಕ್ಷವನ್ನು ಇಂದು ಅಧಿಕೃತವಾಗಿ ಸೇರಲಿದ್ದಾರೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ಮಾತುಕತೆ ನಡೆಸಿ, ಫೈನಲ್ ಮಾಡಿರೋದಾಗಿ ತಿಳಿದು ಬಂದಿದೆ.
2024-25ರಲ್ಲಿ ಐದು ವರ್ಷಗಳ ಕನಿಷ್ಠ ಮಟ್ಟಕ್ಕೆ ಇಳಿಯಲಿದೆ ಚಿಲ್ಲರೆ ಹಣದುಬ್ಬರ : `CMIE’ ವರದಿ
ಇಂದು ‘ಬೆಂಗಳೂರು ಕರಗ’ ಮಹೋತ್ಸವ: ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗ