ರಾಯಚೂರು: ಇಂದು ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಬೊಲೆರೋ ವಾಹನವೊಂದು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.
ರಾಯಚೂರಿನ ಶಕ್ತಿ ನಗರದಲ್ಲಿನ ಯಾದವ ನಗರದ ಕ್ರಾಸ್ ಬಳಿಯಲ್ಲಿ ಬೆಳಗಿನ ಜಾವ 5 ಗಂಟೆಯ ವೇಳೆಯಲ್ಲಿ ಯಮ ಸ್ವರೂಪಿಯಾಗಿ ಬಂದಂತ ಬೊಲೆರೋ ವಾಹನವೊಂದು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಅಯ್ಯನಗೌಡ(28), ಮಹೇಶ್ (22) ಹಾಗೂ ಉದ ಕುಮಾರ(28) ಎಂಬುದಾಗಿ ಗುರುತಿಸಲಾಗಿದೆ. ರಮೇಶ ಭೂಷಣ ಸೇರಿದಂತೆ ಇಬ್ಬರು ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಕೋಳಿ ತುಂಬಿಕೊಂಡು ಬರುತ್ತಿದ್ದ ಬುಲೇರೋ ವಾಹನ ಚಾಲಕ ನಿರ್ಲಕ್ಷ್ಯದಿಂದ ಹಾಗೂ ವೇಗವಾಗಿ ಚಲಾಯಿಸಿ ಅಪಘಾತಕ್ಕೆ ಕಾರಣನಾಗಿದ್ದಾನೆ. ಘಟನಾ ಸ್ಥಳಕ್ಕೆ ಶಕ್ತಿ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಇಂದು ‘ಬೆಂಗಳೂರು ಕರಗ’ ಮಹೋತ್ಸವ: ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗ