ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಸಿಡಿದೆದ್ದಿದ್ದಾರೆ. ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಬರ ಪರಿಹಾರ ಬಿಡುಗಡೆ ಮಾಡದಂತ ಆಸ್ತ್ರವನ್ನ ಕಾಂಗ್ರೆಸ್ ನಾಯಕರು ಬಳಿಸಿಕೊಂಡು ಧರಣಿ, ಪ್ರತಿಭಟನೆ ಇಳಿದಿದ್ದಾರೆ.
ಇಂದು ವಿಧಾನಸೌಧದ ಬಳಿ ಇರುವಂತ ಗಾಂಧಿ ಪ್ರತಿಮೆಯ ಬಳಿಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಸಿಎಂ ಸಿದ್ಧರಾಮಯ್ಯ, ಸಚಿವರು, ಶಾಸಕರು, ಎಂಎಲ್ಸಿಗಳು ಸೇರಿ ಪ್ರತಿಭಟನೆ ಕೈಗೊಂಡಿದ್ದಾರೆ.
ಬರ ಪರಿಹಾರ ವಿತರಣೆಯಲ್ಲಿ ಕೇಂದ್ರ ಸರ್ಕಾರದ ಅನ್ಯಾಯ ಖಂಡಿಸಿ ಧರಣೆಯನ್ನು ಕಾಂಗ್ರೆಸ್ ನಾಯಕರಿಂದ ನಡೆಸಲಾಗುತ್ತಿದೆ. ಗೋ ಬ್ಯಾಕ್ ಅಮಿತ್ ಶಾ ಎಂಬುದಾಗಿಯೂ ಘೋಷಣೆ ಕೂಗಿ ಆಕ್ರೋಶವನ್ನು ಹೊರ ಹಾಕಲಾಗುತ್ತಿದೆ.
ಇಂದು ಬೆಂಗಳೂರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ಪ್ರಚಾರದಲ್ಲಿ ತೊಡಗೋದಕ್ಕೆ ರಾತ್ರಿ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಗೋ ಬ್ಯಾಕ್ ಘೋಷಣೆ ಕೂಗಿ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಭಿತ್ತಿ ಪತ್ರ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಕೂಡಲೇ ಬರ ಪರಿಹಾರವನ್ನು ಬಿಡುಗಡೆ ಮಾಡುವಂತೆ ಕಾಂಗ್ರೆಸ್ ನಾಯಕರು ಆಗ್ರಹಿಸುತ್ತಿದ್ದಾರೆ.
ಇಂದು ‘ಬೆಂಗಳೂರು ಕರಗ’ ಮಹೋತ್ಸವ: ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗ