ಬೆಂಗಳೂರು: ಇಬ್ಬರು ಮಹಿಳೆಯರಿಗೆ ಎಲ್ ಎಸ್ ಸಿಎಸ್ ಶಸ್ತ್ರ ಚಿಕಿತ್ಸೆಯ ನಂತ್ರ ತೀವ್ರ ರಕ್ತಸ್ತ್ರಾವದಿಂದಾಗಿ ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಬಳ್ಳಾರಿಯ ಮೋಕಾ ಸಮುದಾಯ ಆರೋಗ್ಯ ಕೇಂದ್ರದ ಸ್ತ್ರೀರೋಗ ತಜ್ಞೆ ಡಾ.ಪರಿಮಳಾ ಅವರನ್ನು ಸೇವೆಯಿಂದ ಅಮಾನತುಗೊಳಿಸಿ, ಆರೋಗ್ಯ ಇಲಾಖೆ ಆದೇಶಿಸಿದೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದಂತ ಡಿ.ರಂದೀಪ್ ಅವರು ಆದೇಶ ಹೊರಡಿಸಿದ್ದಾರೆ. ದಿನಾಂಕ 07-03-2024ರಂದು ಭಾಗ್ಯಮ್ಮ(23) ಎಂಬುವರು ಮೋಕಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಎಲ್ ಎಸ್ ಸಿಎಸ್ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರಿಗೆ ಸ್ತ್ರೀರೋಗ ತಜ್ಞೆ ಡಾ.ಪರಿಮಳ ದೇಸಾಯಿ ಶಸ್ತ್ರಚಿಕಿತ್ಸೆ ನಡೆಸಿದ್ದರು ಎಂದಿದ್ದಾರೆ.
ಶಸ್ತ್ರಚಿಕಿತ್ಸೆಯ ನಂತ್ರ ಭಾಗ್ಯಮ್ಮ ಅವರಿಗೆ ತೀವ್ರರಕ್ತ ಸ್ತ್ರಾವ ಉಂಟಾಗಿತ್ತು. ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯೋ ಮಾರ್ಗಮಧ್ಯೆದಲ್ಲಿ ಮೃತಪಟ್ಟಿದ್ದರು ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ ಎಂದು ಹೇಳಿದ್ದಾರೆ.
ದಿನಾಂಕ 06-03-2024ರಂದು ಸಿಂಧುವಾಳ ನಗರದ ರಾಜಮ್ಮ(23) ಎಂಬುವರಿಗೆ ಎಲ್ ಎಸ್ ಸಿಎಸ್ ಶಸ್ತ್ರ ಚಿಕಿತ್ಸೆಯನ್ನು ಡಾ.ಪರಿಮಳ ದೇಸಾಯಿ ನೆರವೇರಿಸಿದ್ದರು. ಅವರು ಕೂಡ ತೀವ್ರ ರಕ್ತ ಸ್ತ್ರಾವದಿಂದ ವಿಮ್ಸ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ಪ್ರಕರಣ ಸಂಬಂಧ ತನಿಖೆ ನಡೆಸಿದಾಗ ಸ್ತ್ರೀರೋಗ ತಜ್ಞೆ ಡಾ.ಪರಿಮಳ ದೇಸಾಯಿ ಅವರ ಕರ್ತವ್ಯಲೋಪ, ದುರ್ನಡತೆ ಎಸಗಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಈ ಹಿನ್ನಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಶಿಸ್ತುಕ್ರಮ ಬಾಕಿ ಇರಿಸಿ, ಸೇವೆಯಿಂದ ಅಮಾನತುಗೊಳಿಸಿರೋದಾಗಿ ತಿಳಿಸಿದ್ದಾರೆ.
ನಾಳೆ ಸಂಜೆಯಿಂದ ಏ.26ರ ಮಧ್ಯರಾತ್ರಿವರೆಗೆ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ: ‘ಮದ್ಯ ಮಾರಾಟ’ವೂ ಬಂದ್
ಇಂದು ‘ಬೆಂಗಳೂರು ಕರಗ’ ಮಹೋತ್ಸವ: ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗ