ಶಿವಮೊಗ್ಗ : ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಏ. 24 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ನಗರದ ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ, ಸೊಪ್ಪಿನ ಮಾರುಕಟ್ಟೆ, ಕೆ.ಆರ್.ಪುರಂ. ಭರಮಪ್ಪನಗರ, ಎಂಕೆಕೆ ರಸ್ತೆ, ನಾಗಪ್ಪಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಏ.29: ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ
ಶಿವಮೊಗ್ಗ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಏ.29 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಸಾಯಿ ಎಕ್ಸ್‍ಪೋರ್ಟ್, ಮಾಚೇನಹಳ್ಳಿ, ಶಿವಮೊಗ್ಗ ಇಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ಕನ್ನಿಕಾ ಪರಮೇಶ್ವರಿ ಸಹಕಾರಿ ಬ್ಯಾಂಕ್, ದಾವಣಗೆರೆ ಇಲ್ಲಿ ಕಾರ್ಯಕ್ರಮ ನಡೆಯಲಿದೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.
LSCS ಶಸ್ತ್ರಚಿಕಿತ್ಸೆ ನಂತ್ರ ಇಬ್ಬರು ಮಹಿಳೆಯ ಸಾವು: ಸ್ತ್ರೀರೋಗ ತಜ್ಞೆ ಡಾ.ಪರಿಮಳ ದೇಸಾಯಿ ಅಮಾನತು
ಇಂದು ‘ಬೆಂಗಳೂರು ಕರಗ’ ಮಹೋತ್ಸವ: ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗ