ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಹಿರೇಮಠ್ ಅವರ ತಂದೆ ನಿರಂಜಯ್ಯ ಅವರ ಬಳಿ ಸಿಎಂ ಸಿದ್ದರಾಮಯ್ಯ ಕ್ಷಮೆಯಾಚನೆ ಮಾಡಿದ ಘಟನೆ ನಡೆದಿದೆ.
ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಸದ್ಯ ಕಾನೂನು ಸಚಿವ ಎಚ್‌ಕೆ ಪಾಟೀಲ್ ಹುಬ್ಬಳ್ಳಿಯ ನೇಹಾ ಅವರ ಮನೆಗೆ ಭೇಟಿ ನೀಡಿ ಸಂತ್ವಾನ ಹೇಳಿದರು. ಈ ವೇಳೆ ಸಿಎಂಗೆ ಕರೆ ಮಾಡಿದ ಸಚಿವರು ನೇಹಾ ಹಿರೇಮಠ್ ಅವರ ತಂದೆ ನಿರಂಜಯ್ಯ ಅವರ ಬಳಿ ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿದ್ದು, ನಾವು ನಿಮ್ಮ ಜತೆ ಇರುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಇನ್ನೂ ಇದೇ ವೇಳೆ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. ಜತೆಗೆ ಸಿಐಡಿ ತನಿಖೆಗೆ ನೀಡಲಾಗಿದೆ ಬಳಿಕ I Am Very Sorry… ನಾವು ನಿಮ್ಮ ಜತೆಯಾಗಿರುತ್ತೇವೆ ಎಂದು ಭರವಸೆ ನೀಡಿದರು.ಇನ್ನೂ ಈ ಪ್ರಕರಣವನ್ನು ವಿಚಾರಣೆ ನಡೆಸಲು ಹುಬ್ಬಳ್ಳಿಯಲ್ಲಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಿ ಆದೇಶವನ್ನು ಹೊರಡಿಸಲಾಗಿದೆ.