ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷವನ್ನು ಹರಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿವಿಧ ನಾಗರಿಕ ಸಂಸ್ಥೆಗಳು ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದೆ.
ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸೇರಿದಂತೆ ವಿವಿಧ ಸಂಘಟನೆಗಳು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದ್ದಾರೆ.
ದೂರು ಸ್ವೀಕರಿಸಿರುವ ಮನೋಜ್ ಕುಮಾರ್ ಮೀನಾ ಅವರು ಮೋದಿ ಭಾಷಣಘಟನೆಯು ತಮ್ಮ ವ್ಯಾಪ್ತಿಗೆ ಬರುವುದಿಲ್ಲ. ಹೊರರಾಜ್ಯದಲ್ಲಿ ಭಾಷಣ ಮಾಡಿರುವುದರಿಮದ ರಾಜ್ಯದ ವ್ಯಾಪ್ತಿಗೆ ಬರುವುದಿಲ್ಲ. ಆದರೆ ದೂರನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.