ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಮದು ಅಗ್ನಿ ದುರಂತ ಸಂಭವಿಸಿದ್ದು, ಕೋಟ್ಯಾಂತರ ರೂ. ಮೌಲ್ಯದ ಬಟ್ಟೆಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದಲ್ಲಿ ಈ ಘಟನೆ ನಡೆದಿದೆ. ಮಣಿಪಾಲ್ ಕಂಟ್ರರೋಡ್ ನ ಟಿಂಬರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕಟ್ಟಿಗೆ ಸ್ಟೋರ್ ಮಾಡಿದ್ದ ಜಾಗದಲ್ಲಿ ಅಗ್ನಿ ದುರಂತ ಸಂಬವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರುಗಳು ಸುಟ್ಟು ಭಸ್ಮವಾಗಿವೆ.
ಟಿಂಬರ್ ಹಿಂದಿನ ಗಾರ್ಮೆಂಟ್ಸ್ ಕಟ್ಟಡದಲ್ಲೂ ಬೆಂಕಿ ಹೊತ್ತಿಕೊಂಡಿದೆ. ಬ್ಯಾಂಡೇಡ್ ಬಟ್ಟೆಗಳನ್ನು ಪ್ಯಾಕ್ ಮಾಡುತ್ತಿದ್ದ ಗಾರ್ಮೆಂಟ್ಸ್ ನಲ್ಲಿ ಬೆಂಕಿ ಬಿದ್ದ ಪರಿಣಾಮ ಸುಮಾರು ಐದು ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಟ್ಟೆಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.