ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಸಂಸದ ಡಿ.ಕೆ ಸುರೇಶ್ ಅವರ ಆಪ್ತ ಗಂಗಾಧರ್ ಎಂಬುವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಮಾಜಿ ಕಾರ್ಪೊರೇಟರ್ ಗೆ ಶಾಕ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಐಟಿ ಅಧಿಕಾರಿಗಳ ದಾಳಿ ನಡೆಸಲಾಗಿದೆ. ಸಂಸದ ಡಿ.ಕೆ ಸುರೇಶ್ ಅವರ ಮತ್ತೊಬ್ಬ ಆಪ್ತ, ಮಾಜಿ ಕಾರ್ಪೊರೇಟರ್ ಗಂಗಾಧರ್ ಎಂಬುವರಿಗೆ ಸೇರಿದಂತೆ 6 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು ಬೆಳಿಗ್ಗೆ 6 ಗಂಟೆಗೆ ಈ ದಾಳಿಯನ್ನು ನಡೆಸಲಾಗಿದೆ. ಗಂಗಾಧರ್ ಅವರ ಮನೆಯಲ್ಲಿ ದಾಖಲೆಗಳನ್ನು ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಗಂಗಾಧರ್ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ ವಿಷಯ ತಿಳಿದು, ಅವರ ನಿವಾಸದ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಧಾವಿಸಿ, ಪ್ರತಿಭಟನೆ ಕೈಗೊಂಡಿದ್ದಾರೆ. ಈ ವೇಳೆಯಲ್ಲಿ ಪೊಲೀಸರು, ಕೈ ಕಾರ್ಯಕರ್ತರ ನಡುವೆ ವಾಗ್ವಾದ ಕೂಡ ನಡೆದಿದೆ.
ಇದರ ನಡುವೆ ಸತತ 8 ಗಂಟೆಯಿಂದ ಡಿ.ಕೆ ಸುರೇಶ್ ಆಪ್ತ, ಮಾಜಿ ಕಾರ್ಪೊರೇಟರ್ ಗಂಗಾಧರ್ ಅವರ ನಿವಾಸದಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಖಲೆಯನ್ನು ಪರಿಶೀಲನೆಯಲ್ಲಿ ತೊಡಗಿದ್ದಾರೆ.