ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ನಂತ್ರ, ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಪರೀಕ್ಷೆಗಾಗಿ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.
ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಎನ್ ಮಂಜುಶ್ರೀ ತಿಳಿಸಿದ್ದಾರೆ. ಅದರಲ್ಲಿ 2024ರ ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ 29-04-2024ರಿಂದ ಪ್ರಾರಂಭವಾಗಲಿದೆ ಎಂದಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ನೋಂದಾಯಿಸಿರುವ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನುಮಂಡಳಿಯ ವೆಬ್ ಸೈಟ್ https://kseab.karnataka.gov.in ನಲ್ಲಿ ಪಡೆಯಬಹುದಾಗಿ ಎಂದಿದ್ದಾರೆ.
ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಲು ಹನ್ನೊಂದು ಅಂಕಿಗಳನ್ನೊಳಗೊಂಡ ನೋಂದಣಿ ಸಂಖ್ಯೆಯನ್ನು ನೀಡಬೇಕು. ಇಂತಹ ವಿದ್ಯಾರ್ಥಿಗಳು ಮಾತ್ರವೇ ಪ್ರವೇಶ ಪತ್ರವನ್ನು ಆನ್ ಲೈನ್ ನಿಂದಲೇ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.
ಇನ್ನುಳಿದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪ್ರವೇಶ ಪತ್ರವನ್ನು ( Admission Ticket) ಪಡೆದುಕೊಳ್ಳುವುದು ಎಂದು ಮಾಹಿತಿ ನೀಡಿದ್ದಾರೆ.