ಬೆಂಗಳೂರು : ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆದಿದ್ದು, ಎರಡನೇ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದೆ. 2ನೇ ಹಂತದಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಲೋಕಸಭಾ ಕ್ಷೇತ್ರಗಳೂ ಸೇರಿವೆ.
ಚುನಾವಣೆ ಹಿನ್ನೆಲೆಯಲ್ಲಿ ಎರಡು ದಿನ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಚುನಾವಣಾ ಆಯೋಗವು 2,100 ಕೆಎಸ್ ಆರ್ ಟಿಸಿ ಹಾಗೂ 1,700 ಬಿಎಂಟಿಸಿ ಬಸ್ ಗಳನ್ನು ಬುಕ್ ಮಾಡಿಕೊಂಡಿದ್ದು, ಸರ್ಕಾರಿ ಬಸ್ ಗಳಿಗೆ ಕಿ.ಮೀ. 57 ರೂ. ದರ ನಿಗದಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರದಲ್ಲಿ ಎರಡು ದಿನ ವ್ಯತ್ಯಯವಾಗುವ ಸಾಧ್ಯತೆ ಇದೆ.
ನಾಳೆ ರಾಜ್ಯದ ಈ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ
ಉಡುಪಿ-ಚಿಕ್ಕಮಗಳೂರು
ಹಾಸನ
ದಕ್ಷಿಣ ಕನ್ನಡ
ಚಿತ್ರದುರ್ಗ
ತುಮಕೂರು
ಮಂಡ್ಯ
ಮೈಸೂರು
ಚಾಮರಾಜನಗರ
ಬೆಂಗಳೂರು ಗ್ರಾಮಾಂತರ
ಬೆಂಗಳೂರು ಉತ್ತರ
ಬೆಂಗಳೂರು ಕೇಂದ್ರ
ಬೆಂಗಳೂರು ದಕ್ಷಿಣ
ಚಿಕ್ಕಬಳ್ಳಾಪುರ
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಹಂತಕ್ಕೆ ಮತದಾನ ನಡೆಯಲಿದೆ.