ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿರುವಂತ ವಿದ್ಯಾರ್ಥಿಗಳು ಫಲಿತಾಂಶ ಯಾವಾಗ ಅನ್ನೋ ತೀವ್ರ ಕುತೂಹಲದಲ್ಲಿ ಇದ್ದೀರಿ. ಪರೀಕ್ಷೆ ಮುಗಿದ ಬೆನ್ನಲ್ಲೇ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ಕೂಡ ನಡೆಸಲಾಗುತ್ತಿದೆ. ಇನ್ನೇನು ಫಲಿತಾಂಶ ಪ್ರಕಟಿಸೋದು ಮಾತ್ರವೇ ಬಾಕಿ ಉಳಿದಿದೆ. ಹಾಗಾದ್ರೆ ಯಾವಾಗ ಫಲಿತಾಂಶ ಪ್ರಕಟವಾಗಲಿದೆ ಅನ್ನೋ ಬಗ್ಗೆ ಬಿಗ್ ಅಪ್ ಡೇಟ್ ಮುಂದೆ ಓದಿ.
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ ಹಂಚಿಕೊಳ್ಳಲಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯ ಬಳಿಕ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ನಡೆಯುತ್ತಿದೆ. ಇನ್ನೂ ಕೆಲವೇ ಕೆಲವು ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಬಾಕಿ ಉಳಿದಿದೆ ಎಂದು ತಿಳಿಸಿದೆ.
ಬಾಕಿ ಇರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಕೆಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ನಡೆಯುತ್ತಿದೆ. ಇವುಗಳ ಮೌಲ್ಯ ಮಾಪನ ಕಾರ್ಯವು ಮುಗಿದ ಬಳಿಕ ಶೀಘ್ರದಲ್ಲೇ ಫಲಿತಾಂಶ ಘೋಷಣೆಯ ದಿನಾಂಕವನ್ನು ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.
‘ದ್ವಿತೀಯ PUC ಪರೀಕ್ಷೆ-2’ಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಉಚಿತ ಪ್ರಯಾಣ’ಕ್ಕೆ KSRTC, BMTC ಅವಕಾಶ