ಬೆಂಗಳೂರು: ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಬಗ್ಗೆ ತೀವ್ರ ಟೀಕೆಯಲ್ಲಿ ನಿರತರಾಗಿರುವಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪಕ್ಷದಿಂದ ದೂರು ನೀಡಲಾಗಿದೆ.
ಇಂದು ರಾಜ್ಯ ಚುನಾವಣಾ ಆಯೋಗದ ಮುಖ್ಯ ಕಚೇರಿಗೆ ತೆರಳಿದಂತ ಕಾಂಗ್ರೆಸ್ ಪಕ್ಷದ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು, ರಾಜ್ಯ ಸರ್ಕಾರದ ಗ್ಯಾರಂಟಿಗಳನ್ನು ವಿಪಕ್ಷದ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷದಿಂದ ನೀಡಿರುವಂತ ದೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನೀಡಿರುವಂತ ದೂರಿನಲ್ಲಿ ಕೋರಲಾಗಿದೆ.
BIG NEWS: ‘SSLC ಪರೀಕ್ಷೆ ಫಲಿತಾಂಶ’ದ ಬಗ್ಗೆ ‘ಶಾಲಾ ಶಿಕ್ಷಣ ಇಲಾಖೆ’ಯಿಂದ ಬಿಗ್ ಅಪ್ ಡೇಟ್ | SSLC Exam Results