ಕಲಬುರಗಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ದ್ವೇಷ ಭಾಷಣೆ ಮಾಡಿದಂತ ಆರೋಪ ಹಿನ್ನಲೆಯಲ್ಲಿ ಕಲಬುರ್ಗಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶ್ರೀರಾಮಮೇಲೆ ರಾಜ್ಯಾಧ್ಯಕ್ಷ ಸಿದ್ಧಲಿಂಗಶ್ರೀ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕರ್ನಾಟಕ ಪ್ರದೇಶ ಕುರುಬರ ಸಂಘದಿಂದ ಸಿಎಂ ಸಿದ್ಧರಾಮಯ್ಯ ವಿರುದ್ಧ ಲೋಕಸಭಾ ಚುನಾವಣಾ ನೀತಿ ಸಂಹಿತೆ ಲೆಕ್ಕಿಸದೇ ಕಲಬುರ್ಗಿಯ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್, ಶಾಸಕ ಯತ್ನಾಳ್ ಸೇರಿದಂತೆ ಹಲವರು ಅವಹೇಳನಕಾರಿ ಹೇಳಿಕೆ ಹಾಗೂ ದ್ವೇಷ ಭಾಷಣೆ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕಲಬುರ್ಗಿ ನಗರ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.
ಏಪ್ರಿಲ್.22ರಂದು ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣವನ್ನು ಖಂಡಿಸಿ ಕಲಬುರ್ಗಿ ನಗರದ ಸರ್ಧಾರ್ ವಲ್ಲಭಾಯಿ ಪಟೇಲ್ ವೃತ್ತದಲ್ಲಿ ನಡೆದಿದ್ದಂತ ಪ್ರತಿಭಟನೆಯಲ್ಲಿ ಗಲ್ಲಿ ಗಲ್ಲಿ ಮೇ ಚಾಕು ಹೈ ಸಿದ್ಧರಾಮಯ್ಯ ಡಾಕು ಹೈ. ಫೆಕದೋ ಫೆಕದೋ, ಕಾಂಗ್ರೆಸ್ ಕೋ ಫೆಕದೋ ಎಂಬುದಾಗಿ ಅವಹೇಳನಕಾರಿಯಾಗಿ ಕೂಗಲಾಗಿತ್ತು. ಈ ಸಂಬಂಧ ನೀಡಲಾಗಿದ್ದಂತ ದೂರಿನ ಹಿನ್ನಲೆಯಲ್ಲಿ ಈಗ ಎಫ್ಐಆರ್ ದಾಖಲಾಗಿದೆ.
BIG NEWS: ನೇಹಾ ಹಿರೇಮಠ್ ಕೊಲೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸಲು ಪ್ರಯತ್ನ- CM ಸಿದ್ಧರಾಮಯ್ಯ
BREAKING : ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ಅಬಕಾರಿ ನೀತಿ ಹಗರಣದ ‘ಕಿಂಗ್ ಪಿನ್’ : ED