ಬೆಂಗಳೂರು: : 2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಇಂದು (ಶುಕ್ರವಾರ) 12 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶ ಸೇರಿದಂತೆ 88 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭವಾಗಿದೆ.
ರಾಜ್ಯದಲ್ಲಿ ಮತದಾನಕ್ಕೆ (Election) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಬೆಳಗ್ಗೆ 11ಗಂಟೆಯ ವೇಳೆಗೆ ಕರ್ನಾಟಕದಲ್ಲಿ (Karnataka) 22.34% ಮತದಾನ ನಡೆದಿದೆ.ಈ ಪೈಕಿ ದಕ್ಷಿಣ ಕನ್ನಡದಲ್ಲಿ (Dakshina Kannada) ಅತಿ ಹೆಚ್ಚು 31 % ದಾಖಲಾಗಿದೆ.