ಚಾಮರಾಜನಗರ: ಜಿಲ್ಲೆಯಲ್ಲಿ ಮತಗಟ್ಟೆಯ ಬಳಿಯಲ್ಲಿ ಜನರನ್ನು ಚದುರಿಸಲು ಪೊಲೀಸರು ನಡೆಸಿದಂತ ಲಾಠಿ ಚಾರ್ಜ್ ನಿಂದ ರೊಚ್ಚಿಗೆದ್ದಂತ ಗ್ರಾಮಸ್ಥರು, ಪೊಲೀಸರ ಮೇಲೆ ಪ್ರತಿದಾಳಿ ನಡೆಸಿ, ಮತಗಟ್ಟೆಯಲ್ಲಿನ ಮೇಜು, ಕುರ್ಚಿ, ಇವಿಎಂ ಮಿಷಿನ್ ಧ್ವಂಸಗೊಳಿಸಿರುವಂತ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ಬಳಿಯ ಇಂಡಿಗನತ್ತ ಗ್ರಾಮದಲ್ಲಿ ಇಂದು ಲೋಕಸಭಾ ಚುನಾವಣೆಯ ಕಾರಣದಿಂದಾಗಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ಮತಕೇಂದ್ರದ ಬಳಿಯಲ್ಲಿ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಧರಣಿ, ಪ್ರತಿಭಟನೆ ನಡೆಸುತ್ತಿದ್ದರು.
ಪ್ರತಿಭಟನಾ ಸ್ಥಳಕ್ಕೆ ಬಂದಂತ ಅಧಿಕಾರಿಗಳು ಗ್ರಾಮಸ್ಥರನ್ನು ಮನವೊಲಿಕೆಗೆ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಜೊತೆಗೆ ಚುನಾವಣಾಧಿಕಾರಿಗಳು, ಗ್ರಾಮಸ್ಥರ ನಡುವೆ ವಾಗ್ವಾದಕ್ಕೂ ಕಾರಣವಾಗಿತ್ತು. ಈ ವೇಳೆಯಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸೋದಕ್ಕೆ ಪೊಲೀಸರು ಲಾಠಿ ಚಾರ್ಜ್ ನಡೆಸಿದರು.
ಪೊಲೀಸರ ಲಾಠಿ ಚಾರ್ಜ್ ನಿಂದ ರೊಚ್ಚಿಗೆದ್ದಂತ ಗ್ರಾಮಸ್ಥರು ಇಂಡಿಗನತ್ತ ಮತಗಟ್ಟೆಯ ಮೇಲೆ ದಾಳಿ ನಡೆಸಿದರು. ಮತಕೇಂದ್ರದಲ್ಲಿನ ಮೇಜು, ಕುರ್ಚಿ, ಇವಿಎಂ ಯಂತ್ರವನ್ನು ಪುಡಿಪುಡಿ ಮಾಡಿದ್ದಾರೆ. ಈಗ ಸ್ಥಳದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಬಿಗಿ ಪೊಲೀಸ್ ಬಂಧೋಬಸ್ತ್ ಕೈಗೊಳ್ಳಲಾಗಿದೆ.
ಇನ್ನೂ ಮತಗಟ್ಟೆಯ ಮೇಲೆ ಗ್ರಾಮಸ್ಥರ ದಾಳಿಯಿಂದಾಗಿ ಮತಗಟ್ಟೆಯ ಕೆಲ ಅಧಿಕಾರಿಗಳು ಗಾಯಗೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಹನೂರು ತಹಶೀಲ್ದಾರ್ ಆಗಮಿಸಿ, ಪರಿಸ್ಥಿತಿ ನಿಯಂತ್ರಿಸೋಕ್ಕೆ ಕ್ರಮವಹಿಸಿದ್ದಾರೆ.
BREAKING: ನೇಹಾ ಹಿರೇಮಠ ಹತ್ಯೆ ಪ್ರಕರಣ: ರಾಜ್ಯ ಸರ್ಕಾರದಿಂದ ತಂದೆಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆ