ಬೆಂಗಳೂರು: ಕರ್ನಾಟಕ ಹೈಕೋರ್ಟ್ ಗೆ ಏಪ್ರಿಲ್.29ರಿಂದ ಮೇ.25ರವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರ್ಗಿಯಲ್ಲಿ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲದ ಪೀಠಗಳನ್ನು ರಚಿಸಲಾಗಿದೆ.
ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಎಂ ಚಂದ್ರಶೇಖರರೆಡ್ಡಿ ಮಾಹಿತಿ ನೀಡಿದ್ದು, ರಜಾ ಸಂದರ್ಭದಲ್ಲಿ ಪ್ರಧಾನ ಪೀಠದಲ್ಲಿ ಒಟ್ಟು ಎಂಟು ದಿನ, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿ ಏಳು ದಿನ ವಿಚಾರಣೆ ನಡೆಸಲಿದೆ ಎಂದು ತಿಳಿಸಿದ್ದಾರೆ.
ಇನ್ನೂ ಮದ್ಯಂತರ ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕಾದೇಶ ಇತ್ಯಾದಿ ಪ್ರಕರಣಗಳ ವಿಚಾರಣೆಯನ್ನು ಮಾತ್ರ ಈ ಅವಧಿಯಲ್ಲಿ ನಡೆಸಲಾಗುತ್ತದೆ ಎಂದಿದ್ದಾರೆ.
ಬೇಸಿಗೆ ರಜಾ ಕಾಲದ ಹೈಕೋರ್ಟ್ ನ್ಯಾಯಪೀಠದಲ್ಲಿ ಮೇಲ್ಮನವಿ, ಕ್ರಿಮಿನಲ್ ಮೇಲ್ಮನವಿ, ಕ್ರಿಮಿನಲ್ ಅರ್ಜಿ, ಸಿವಿಲ್ ರೂಪದ ಅರ್ಜಿಗಳ ವಿಚಾರಣೆ ಇರುವುದಿಲ್ಲ. ಇ-ಫೈಲಿಂಗ್ ಪೋರ್ಟಲ್ ಮೂಲಕ ಇ-ಫೈಲಿಂಗ್ ಮಾಡಬಹುದು ಎಂಬುದಾಗಿ ಹೈಕೋರ್ಟ್ ರಿಜಿಸ್ಟ್ರಾರ್ ಎಂ ಚಂದ್ರಶೇಖರರೆಡ್ಡಿ ತಿಳಿಸಿದ್ದಾರೆ.
BREAKING: ಮಣಿಪುರದಲ್ಲಿ CRPF ಬೆಟಾಲಿಯನ್ ಮೇಲೆ ಉಗ್ರರ ದಾಳಿ, ಇಬ್ಬರು ಯೋಧರು ಹುತಾತ್ಮ
ಇನ್ನೂ ವರ್ಷಕ್ಕೆ ಎರಡು ಬಾರಿ ‘CBSE’ ಬೋರ್ಡ್ ಪರೀಕ್ಷೆ : ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿ ಸಾಧ್ಯತೆ