ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.
ಈ ಪ್ರಕರಣದ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಮುಖ್ಯಮಂತ್ರಿಗಳು ತನಿಖೆಗೆ ಎಸ್ ಐಟಿ ತನಿಖೆಗೆ ಆದೇಶಿಸಿದ್ದಾರೆ. ನಾನಾಗಲಿ, ದೇವೇಗೌಡರಾಗಲಿ ಹೆಣ್ಣು ಮಕ್ಕಳ ವಿಷಯದಲ್ಲಿ ಕಷ್ಟದಲ್ಲಿ ಯಾರಾದ್ರೂ ಬಂದಾಗ ಅವರ ಕಷ್ಟಗಳನ್ನು ಪರಿಹರಿಸಿದ್ದೇವೆ ಮತ್ತು ಗೌರವಿಸಿದ್ದೇವೆ ಎಂದು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಎಸ್ ಐಟಿ ತನಿಖೆಗೆ ಆದೇಶ ನೀಡಿದ್ದಾರೆ. ಹಾಸನದ ಪ್ರಕರಣ ಚುನಾವಣೆ ಸಂದರ್ಭದಲ್ಲಿ ಪ್ರಾರಂಭವಾಗಿದೆ. ತನಿಖೆಯ ಮೂಲಕ ಸತ್ಯಾಸತ್ಯತೆ ಹೊರಗಡೆ ಬರಲಿ. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದ್ರೂ ಉಪ್ಪು ತಿಂದವರು ನೀರು ಕುಡಿಯಲೇಬೇಕು. ನಾವು ಯಾವುದೇ ಕಾರಣಕ್ಕೂ ಯಾವುದಕ್ಕೂ ತಪ್ಪು ಮಾಡಿದ ವಿಷಯದಲ್ಲಿ ಯಾರಿಗೂ ಕ್ಷಮಿಸುವುದಿಲ್ಲ. ತನಿಖೆಯ ವರದಿ ಸಂಪೂರ್ಣವಾಗಿ ಹೊರಗೆ ಬರಲಿ ನಂತರ ಮಾತನಾಡುತ್ತೇನೆ ಎಂದರು.