ಬೆಂಗಳೂರು: 2024ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ( KARTET-2024)ಗೆ ಅರ್ಜಿ ಆಹ್ವಾನಿಸಲಾಗಿದ್ದು,ಅರ್ಜಿ ಸಲ್ಲಿಸಲು ಮೇ.15 ರವರೆಗೆ ಅವಕಾಶ ನೀಡಲಾಗಿದೆ.
ಈ ಕುರಿತಂತೆ ಇಂದು ಕೇಂದ್ರೀಕೃತ ದಾಖಲಾತಿ ಘಟಕದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. 2024ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ( KARTET-2024)ಯು ದಿನಾಂಕ 30-06-2024ರಂದು ರಾಜ್ಯಾಧ್ಯಂತ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ವೆಬ್ ಸೈಟ್ https://schooleducation.karnataka.gov.in ಜಾಲತಾಣಕ್ಕೆ ಭೇಟಿ ನೀಡಿ, ಅರ್ಜಿಯನ್ನು ಸಲ್ಲಿಸಬಹುದು. ಇದೇ ವೆಬ್ ಲಿಂಕ್ ನಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-05-2024 ಆಗಿರುತ್ತದೆ ಎಂದು ಹೇಳಿದ್ದಾರೆ.