ಕರಾಚಿ: ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಗ್ಯಾರಿ ಕರ್ಸ್ಟನ್ ಮತ್ತು ಜೇಸನ್ ಗಿಲೆಸ್ಪಿ ಅವರನ್ನು ಕ್ರಮವಾಗಿ ಬಿಳಿ ಮತ್ತು ಕೆಂಪು ಚೆಂಡಿನ ಸ್ವರೂಪದ ಪಾಕಿಸ್ತಾನ ಹಿರಿಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರನ್ನಾಗಿ ನೇಮಿಸಿದೆ. ಪಾಕಿಸ್ತಾನದ ಮಾಜಿ ಆಲ್ರೌಂಡರ್ ಅಜರ್ ಮಹಮೂದ್ ಅವರನ್ನು ಎಲ್ಲಾ ಮಾದರಿಯ ಸಹಾಯಕ ಕೋಚ್ ಆಗಿ ನೇಮಿಸಲಾಗಿದೆ.
. ಪಿಸಿಬಿ ಜೇಸನ್ ಗಿಲೆಸ್ಪಿ ಮತ್ತು ಗ್ಯಾರಿ ಕರ್ಸ್ಟನ್ ಅವರೊಂದಿಗೆ ಎರಡು ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದೆ. ಇದರರ್ಥ ಗ್ಯಾರಿ ಕರ್ಸ್ಟನ್ ಅವರ ಅಧಿಕಾರಾವಧಿಯಲ್ಲಿ ಪಾಕಿಸ್ತಾನ 2025 ರ ಚಾಂಪಿಯನ್ಸ್ ಟ್ರೋಫಿಯನ್ನು ಆಡಲಿದೆ.
— Pakistan Cricket (@TheRealPCB) April 28, 2024