ನವದೆಹಲಿ : ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಅರವಿಂದ್ ಸಿಂಗ್ ಲವ್ಲಿ ಅವರು 2024 ರ ಲೋಕಸಭಾ ಚುನಾವಣೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದೊಂದಿಗಿನ ಮೈತ್ರಿಯನ್ನು ತಮ್ಮ ರಾಜೀನಾಮೆಗೆ ಒಂದು ಕಾರಣವೆಂದು ಉಲ್ಲೇಖಿಸಿದ್ದಾರೆ.
ಅರವಿಂದರ್ ಸಿಂಗ್ ಲವ್ಲಿ, “ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು, ಕಪೋಲಕಲ್ಪಿತ ಮತ್ತು ದುರುದ್ದೇಶಪೂರಿತ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸುವ ಏಕೈಕ ಆಧಾರದ ಮೇಲೆ ರಚಿಸಲಾದ ಪಕ್ಷದೊಂದಿಗಿನ ಮೈತ್ರಿಯನ್ನು ದೆಹಲಿ ಕಾಂಗ್ರೆಸ್ ಘಟಕ ವಿರೋಧಿಸಿತ್ತು. ಅದರ ಹೊರತಾಗಿಯೂ, ದೆಹಲಿಯಲ್ಲಿ ಎಎಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ಪಕ್ಷ ತೆಗೆದುಕೊಂಡಿತು ” ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
ಗುಜರಾತ್ ಕರಾವಳಿಯಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ನೊಂದಿಗೆ 14 ಪಾಕ್ ಪ್ರಜೆಗಳ ಬಂಧನ
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರಿನಲ್ಲಿ ಚಿಟಿಕೆ ‘ಉಪ್ಪು’ ಹಾಕಿ ಕುಡಿದ್ರೆ ಏನಾಗುತ್ತೆ ಗೊತ್ತಾ.?