ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ತಿರುವಿನಲ್ಲಿ 100 ಅಡಿ ಕಂದಕಕ್ಕೆ ಬಸ್ ಉರುಳಿ ಬಿದ್ದಿದೆ. ಈ ಪರಿಣಾಮ 23ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿರೋ ಘಟನೆ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಕ್ಕೆ ಜನರನ್ನು ಕರೆದೊಯ್ದಿದ್ದಂತ ಬಸ್ ಒಂದು ಉರುಳಿ ಬಿದ್ದಿದೆ. ಸುಮಾರು 100 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ, 23 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದರೇ, ಆರು ಜನರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಪ್ರವಾಸಿ ಬಸ್ ಉರುಳಿ ಬಿದ್ದು ಗಾಯಗೊಂಡ ಪ್ರಯಾಣಿಕರನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಂದಹಾಗೇ ತುಮಕೂರು ಜಿಲ್ಲೆಯ ಶಿರಾ ತಾಲೂಕಿನಿಂದ ಚಿಕ್ಕಮಗಳೂರಿನ ಮಾಣಿಕ್ಯಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಜನರು ತೆರಳಿದ್ದರು. ಈ ವೇಳೆಯಲ್ಲಿ ದತ್ತಪೀಠ-ಮಾಣಿಕ್ಯಧಾರ ಮಾರ್ಗ ಮಧ್ಯೆ ಈ ದುರ್ಘಟನೆ ನಡೆದಿದೆ.
ಹಾಸನ ಅಶ್ಲೀಲ ವಿಡಿಯೋ ಕೇಸ್: ಅಜ್ಜಿಯನ್ನು ಬಿಡದ ರಾಕ್ಷಸನಿಗೆ ಶಿಕ್ಷೆಯಾಗಲಿ- ಭವ್ಯ ನರಸಿಂಹಮೂರ್ತಿ
ಕಾಂಗ್ರೆಸ್ ರಾಜಕುಮಾರ ನಮ್ಮ ಮಹಾರಾಜರನ್ನ ಅವಮಾನಿಸ್ತಾರೆ, ನವಾಬರ ದೌರ್ಜನ್ಯ ಮರೆತು ಬಿಡ್ತಾರೆ : ಪ್ರಧಾನಿ ಮೋದಿ