ಬೆಂಗಳೂರು :ಮೂತ್ರಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಡರಾತ್ರಿ 1.20 ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಮೂತ್ರಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ ಎಂದು ಅವರ ಪುತ್ರಿ ಮಾಹಿತಿ ನೀಡಿದ್ದಾರೆ.
ಮೈಸೂರಿನಲ್ಲಿ ಇಂದು ಶ್ರೀನಿವಾಸ್ ಪ್ರಸಾದ್ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಬೆಂಗಳೂರಿನಿಂದ ಮೈಸೂರಿಗೆ ಪಾರ್ಥಿವ ಶರೀರ ಶಿಫ್ಟ್ ಮಾಡಲಾಗುತ್ತದೆ. ಬಳಿಕ ಮೈಸೂರಿನ ಜಯಲಕ್ಷ್ಮಿಪುರಂ ನಲ್ಲಿ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಪುತ್ರಿ ಪೂರ್ಣಿಮಾ ಪ್ರಸಾದ್ ಮಾಹಿತಿ ನೀಡಿದ್ದಾರೆ.