ನವದೆಹಲಿ: ಛತ್ತೀಸ್ಗಢದ ಬೆಮೆಟಾರಾ ಜಿಲ್ಲೆಯಲ್ಲಿ ಸರಕು ವಾಹನವು ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಮತ್ತು ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು 23 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಂತ್ರಸ್ತರು ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಕಾಥಿಯಾ ಗ್ರಾಮದ ಬಳಿ ಭಾನುವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರು ಪಥರ್ರಾ ಗ್ರಾಮದವರಾಗಿದ್ದು, ತಿರೈಯಾ ಗ್ರಾಮದಲ್ಲಿ ನಡೆದ ಕುಟುಂಬ ಸಮಾರಂಭದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಸರಕು ವಾಹನವು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಮಿನಿ ಟ್ರಕ್ಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮೃತರನ್ನು ಭುರಿ ನಿಷಾದ್ (50), ನೀರಾ ಸಾಹು (55), ಗೀತಾ ಸಾಹು (60), ಅಗ್ನಿಯಾ ಸಾಹು (60), ಖುಷ್ಬು ಸಾಹು (39), ಮಧು ಸಾಹು (5), ರಿಕೇಶ್ ನಿಷಾದ್ (6) ಮತ್ತು ಟ್ವಿಂಕಲ್ ನಿಷಾದ್ (6) ಎಂದು ಗುರುತಿಸಲಾಗಿದೆ.
ಗಾಯಗೊಂಡವರನ್ನು ಎರಡು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ನಂತರ, ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ರಾಯ್ಪುರದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು