ಬೆಂಗಳೂರು: ತಮ್ಮ ಪುತ್ರ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಎಚ್.ಡಿ.ರೇವಣ್ಣ, ಇದು ಪಿತೂರಿ ಎಂದು ಹೇಳಿದ್ದಾರೆ.
ಕಳೆದ ವಾರ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಹೊರಬಂದಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಭಾನುವಾರ ಪ್ರಜ್ವಲ್ ಹಾಗೂ ಆತನ ತಂದೆಯ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು.
ಇ ದೆಲ್ಲಾ ಷಡ್ಯಂತ್ರ, ಇದಕ್ಕೆಲ್ಲಾ ಹೆದರಿ ಓಡಿ ಹೋಗಲ್ಲ. ಕಾನೂನು ಹೋರಾಟ ಮಾಡ್ತಿನಿ. ನನ್ನ ವಿರುದ್ಧ ನೀಡಿದ ದೂರಿನ ಬಗ್ಗೆ, ಯಾವುದೇ ಪ್ರತಿಕ್ರಿಯೆ ಕೊಡಲ್ಲ. ಸರ್ಕಾರ ಎಸ್‌ಐಟಿಗೆ ವಹಿಸಿದೆಯಲ್ಲಾ, ಎಸ್‌ಐಟಿ ತನಿಖೆ ಮಾಡಲಿ ಎಂದು ಹೇಳಿದರು. ದೇವೇಗೌಡರ ಕುಟುಂಬದ ವಿರುದ್ಧ ಷಡ್ಯಂತ್ರ ಹೊಸದಲ್ಲ. ಇಂತಹ ಹಲವು ತನಿಖೆ ನಾವು ಎದುರಿಸಿದ್ದೇವೆ. ದೇವೇಗೌಡರ ಮೇಲೆ ಸಿಒಡಿ ತನಿಖೆ ನಡೆಸಿದ್ದರು, ನಾನು ದೇವೇಗೌಡರ ಬಳಿ ಈ ವಿಷಯ ಮಾತನಾಡಿಲ್ಲ. ಕಾನೂನು ರೀತಿ ಏನಿದೆ ಅದು ನಡೆಯಲಿ ಎಂದು ಹೇಳಿದರು.