ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ಒಂದಲ್ಲ, ಎರಡಲ್ಲ ಬರೋಬ್ಬರಿ 2800 ಯುವತಿಯರು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದಾಗಿ ಕಾಂಗ್ರೆಸ್ ಯುವ ನಾಯಕ ನಲಪಾಡ್ ಗಂಭೀರ ಆರೋಪ ಮಾಡಿದ್ದಾರೆ.
ಇಂದು ಹುಬ್ಬಳ್ಳಿಯಲ್ಲಿ ಯುವಕ ಕಾಂಗ್ರೆಸ್ ಘಟಕದಿಂದ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಪ್ರತಿಭಟನೆ ನಡೆಸಲಾಯಿತು. ಅವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆಯೂ ಒತ್ತಾಯಿಸಲಾಯಿತು.
ಈ ಪ್ರತಿಭಟನೆಯ ವೇಳೆ ಮಾತನಾಡಿದಂತ ಮೊಹಮ್ಮದ್ ನಲಪಾಡ್ ಅವರು, ಸಂಸದ ಪ್ರಜ್ವಲ್ ರೇವಣ್ಣ ಅವರು 2800 ಕಾಮಕಾಂಡ ದೌರ್ಜನ್ಯ ನಡೆಸಿದ್ದಾನೆ ಎಂಬುದಾಗಿ ಗಂಭೀರ ಆರೋಪ ಮಾಡಿದರು.
ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವೀಡಿಯೋ ನೋಡಿ ನಾನು 2 ದಿನ ನಿದ್ದೆ ಮಾಡಿಲ್ಲ. ಮನೆ ಕೆಲಸ ಮಾಡೋ ಮಹಿಳೆ ನೋಡಿ ಕಣ್ಣಲ್ಲಿ ನೀರು ಬಂತು ಎಂದರು.
ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ಇದ್ದರೂ ಬಿಡಲ್ಲ. ಕಾಂಗ್ರೆಸ್ ಸರ್ಕಾರ ಅವನ ವಿರುದ್ಧ ಕಾನೂನು ಕ್ರಮ ಜರುಗಿಸಲಿದೆ. ಪ್ರಜ್ವಲ್ ರೇವಣ್ಣ ಹಿಡಿದು ಜೈಲಿಗೆ ಹಾಕೋವರೆಗೂ ನಮ್ಮ ಹೋರಾಟ ನಿಲ್ಲೋದಿಲ್ಲ ಎಂಬುದಾಗಿ ಗುಡುಗಿದರು.
ಶಿವಮೊಗ್ಗ: ಸಿಟಿ ಸೆಂಟರ್ ಮಾಲ್ ನಲ್ಲಿ ಗಮನ ಸೆಳೆಯುತ್ತಿರುವ ಚುನಾವಣೆ ಮಾಡೆಲ್
BIG NEWS : ಖಾಸಗಿ ಆಸ್ಪತ್ರೆಗಳಲ್ಲಿ ಏಕರೂಪದ ದರ : ಕೇಂದ್ರ ಸರ್ಕಾರದಿಂದ ಮಾಹಿತಿ ಕೇಳಿದ ಸುಪ್ರೀಂಕೋರ್ಟ್