ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಬೆಂಗಳೂರಿನ ಹಳೆ ಮದ್ರಾಸ್ ರಸ್ತೆಯಲ್ಲಿರುವಂತ ಮಣಿಪಾಲ್ ಆಸ್ಪತ್ರೆಗೆ ಮಾಜಿ ಸಿಎಂ ಎಸ್ಎಂ ಕೃಷ್ಣಾ ಅವರನ್ನು ಆರೋಗ್ಯದಲ್ಲಿ ಏರುಪೇರಾದ ಪರಿಣಾಮ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂಬುದಾಗಿ ಆಸ್ಪತ್ರೆಯ ವೈದ್ಯರು ಬುಲೆಟಿನ್ ಮೂಲಕ ತಿಳಿಸಿದ್ದಾರೆ.
ಏಪ್ರಿಲ್.21ರಂದು ಎಸ್ ಎಂ ಕೃಷ್ಣ ಅವರಿಗೆ ಜ್ವರ, ಕೆಮ್ಮ ಕಾಣಿಸಿಕೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆಯ ನಂತ್ರ ಅವರು ಡಿಸ್ಚಾರ್ಜ್ ಆಗಿದ್ದರು. ಆದ್ರೇ ಇಂದು ಅವರ ಆರೋಗ್ಯದಲ್ಲಿ ಏರುಪೇರಾದ ಪರಿಣಾಮ, ಮತ್ತೆ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಪ್ರಧಾನಿ ಮೋದಿ ಮುಂದಿನ ಗುರಿ ‘ಶೂನ್ಯ ವಿದ್ಯುತ್ ಬಿಲ್’, ಪ್ರತಿ ಮನೆಯಲ್ಲೂ ‘ಸೌರ ಫಲಕ’ ಅಳವಡಿಕೆ