ಬೆಳಗಾವಿ: ನೂರಾರು ಮಹಿಳೆಯರನ್ನು ಪ್ರಜ್ವಲ್ ಜೀವಂತ ಕೊಲೆ ಮಾಡಿದ್ದಾರೆ ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ, ಅವರು ಜ್ವಲ್ ರೇವಣ್ಣ ನೂರಾರು ಮಹಿಳೆಯರ ವೀಡಿಯೋ ಮಾಡಿ ಮಹಿಳೆಯರನ್ನು ಜೀವಂತವಾಗಿ ಕೊಲೆ ಮಾಡಿದ್ದಾರೆ. ಇಷ್ಟೆಲ್ಲಾ ನಡೆದ್ರೂ ಬಿಜೆಪಿಯವರು ಬಾಯಿಮುಚ್ಚಿಕೊಂಡು ಕುಳಿತುಕೊಂಡಿದ್ದಾರೆ ಅಂಥ ಆರೋಪಿಸಿದರು. ಇನ್ನೂ ಇದೇ ವೇಳೆ ಅವರು ಮಾತನಾಡುತ್ತ, ಹುಬ್ಬಳ್ಳಿಯಲ್ಲಿ ಹೋರಾಟ ಮಾಡಿದವರಿಗೆ ಈ ನೂರಾರು ಮಹಿಳೆಯರ ನೋವಿನ ಕೂಗು ಏಕೆ ಕೇಳುತ್ತಿಲ್ಲ? ಏಕೆ ಮೌನ ವಹಿಸಿದ್ದಾರೆ ಎಂದು ಅವರು ಪ್ರಶ್ನೆ ಮಾಡಿದರು.